Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಂಬೇಡ್ಕರ್ ವಿವಿದ್ದೋದ್ದೇಶ ಸಹಕಾರ ಸಂಘದ ಸರ್ವಸದಸ್ಯರ ಮಹಾಸಭೆ

ಅಂಬೇಡ್ಕರ್ ವಿವಿದ್ದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ನಿರ್ವಹಣಾ ಸಮಿತಿ ಸದಸ್ಯ ಗುರುಶಂಕರ್ ತಿಳಿಸಿದರು.

ಮಂಡ್ಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ವಿಶ್ವವಿದ್ಯಾಲಯದ ಬೋಧಿದತ್ತ ಬಂತೇಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಮಹಾಸಭೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸುವರು ಎಂದರು.

ವಿಶೇಷ ಆಹ್ವಾನಿತರಾಗಿ ಶಾಸಕರಾದ ನರೇಂದ್ರಸ್ವಾಮಿ, ಪಿ.ರವಿಕುಮಾರ್ ಗೌಡ, ಬಹುಜನ ಸಮಾಜ ಪಕ್ಷದ ಮುಖಂಡ ಎಂ.ಕೃಷ್ಣಮೂರ್ತಿ, ಇಂಗ್ಲೆಂಡಿನ ಫೌಂಡೇಷನ್ ಅಧ್ಯಕ್ಷರಾದ ಎಂ.ಬಿ.ಹರಿಪ್ರಸಾದ್,ಸ ಹಾಯಕ ತೋಟಗಾರಿಕೆ ನಿರ್ದೇಶಕಿ ಎ.ಆಶಾ, ಡಿ.ಎಸ್.ಎಸ್.ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಭಾಗವಹಿಸಲಿದ್ದು, ಸಂಘದ ಸಂಸ್ಥಾಪಕ ರಾಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ .ಆದ್ದರಿಂದ ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಸಂಘದ ನಿರ್ವಹಣಾ ಸಮಿತಿ ಸದಸ್ಯರಾದ ಜಯಶಂಕರ,ರಾಜೇಶ್,ಮುರುಗನ್,ಕುಮಾರ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!