Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರಕರಣ ತನಿಖೆ ಮಾಡಿ ಎಂದರೆ ಕೇಸ್ ಹಾಕುತ್ತಾರೆ : ಆರ್.ಅಶೋಕ್

ತಪ್ಪು ಆಗಿದ್ದರೆ ಪ್ರಕರಣ ತನಿಖೆ ಮಾಡಿ ಎನ್ನುವ ಅಧಿಕಾರ ವಿಪಕ್ಷ ನಾಯಕನಿಗಿದೆ. ತನಿಖೆ ಮಾಡಿ ಎಂದು ಹೇಳಿಪೋಸ್ಟ್‌ನಲ್ಲಿ ಕೂಡ ಹಾಕಿದ್ದೇನೆ. ತನಿಖೆ ಮಾಡಿ ಎನ್ನುವುದು ತಪ್ಪೇ ? ಇದಕ್ಕಾಗಿ ನನ್ನ ಮೇಲೆ ಕೇಸ್ ಹಾಕಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.

ಮಂಡ್ಯ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ಯಾಲೆಸ್ತೇನಿ ಧ್ವಜ ಹಿಡಿದರೆ ತಪ್ಪೇನು ಎಂದು ಆ ಮಂತ್ರಿ ಹೇಳುತ್ತಾರೆ, ಇಲ್ಲಿ ಹಿಡಿಯುವ ಅವಶ್ಯಕತೆ ಏನಿದೆ, ಕಾಂಗ್ರೆಸ್ ಸರ್ಕಾರ ಕೋಮು ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಸರ್ಕಾರ ನನ್ನ ಬಾಯಿ ಮುಚ್ಚುವ ಕೆಲಸ ಮಾಡುತ್ತಿದೆ. ನನ್ನ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹುಬ್ಬಳ್ಳಿ ವಿಚಾರವಾಗಿ ಕೂಡ ಕೇಸ್ ಹಾಕಿದ್ದಾರೆ. ಇವರು ಹೇಳಿದ ಹಾಗೆ ಕೇಳಿಕೊಂಡು ಇರಬೇಕಾ ? ಇದಕ್ಕಾಗಿಯೇ ವಿರೋಧ ಪಕ್ಷವೇ, ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ಬಿಜೆಪಿಯನ್ನು ತುಳಿಯುವ ಷಡ್ಯಂತ್ರವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮುನಿರತ್ನ ಅವರಿಗೆ ನೋಟೀಸ್ ಕೊಟ್ಟಿದ್ದೇವೆ. ಎಫ್‌ಎಸ್‌ಎಲ್ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ನವರು ಸಂಚು ಮಾಡಿ ದೇವೇಗೌಡರ ಕುಟುಂಬವನ್ನು ಮುಗಿಸಲು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್‌ನ ಒಕ್ಕಲಿಗರು ಹೋರಾಟ ಮಾಡಲಿಲ್ಲ. ಇದೀಗ ಸಿದ್ದರಾಮಯ್ಯರನ್ನು ಬದಲಾವಣೆ ಮಾಡಿ ಒಕ್ಕಲಿಗರನ್ನು ಸಿಎಂ ಮಾಡಿ ಎನ್ನುತ್ತಾರೆ. ಈಗಾಗಲೇ ಕೆಲವರು ಪೇಪರ್ ಕೊಡಿ ಎಂದು ಕೇಳಿದ್ದರು. ನಿಮ್ಮ ತರ ಡಬಲ್‌ಸ್ಟಾಂಡ್ ಆಗಿ ಮಾತನಾಡಲ್ಲ. ನಾವು ಈಗಾಗಲೇ ಹೇಳಿದ್ದೇವೆ. ತಪ್ಪು ಮಾಡಿದವರು ಉಪ್ಪು ತಿಂದವರು, ನೀರು ಕುಡಿಯಲೇಬೇಕು ಎಂದಿದ್ದೇವೆ. ಎಫ್‌ಎಸ್‌ಎಲ್ ವರದಿ ಕೊಡಿ, ನೀವು ರಾಜಕಾರಣ ಮಾಡುತ್ತಿದ್ದೀರಿ. ನಾವೂ ರಾಜಕಾರಣ ಮಾಡುತ್ತಿದ್ದೇವೆ. ಕಾನೂನು ಮುಂದೆ ಯಾರೂ ಇಲ್ಲಘ. ಈಗಾಗಲೇ ಮುನಿರತ್ನ ಅವರಿಗೆ ನೋಟೀಸ್ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಎಸ್.ಸಚ್ಚಿದಾನಂದ, ಅಶೋಕ್ ಕುಮಾರ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!