Saturday, September 21, 2024

ಪ್ರಾಯೋಗಿಕ ಆವೃತ್ತಿ

ತುಮಕೂರಿನಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ವೃತ್ತದ ಬಳಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಿತ್ತು. ಪುನೀತ್ ಕೆರೆಹಳ್ಳಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಲಾಗಿದೆ.

ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!