Sunday, November 22, 2026

ಪ್ರಾಯೋಗಿಕ ಆವೃತ್ತಿ

ಶೇ.33 ಮಹಿಳಾ ಮೀಸಲಾತಿ | ದೇಶದ ಎಲ್ಲ ವಕೀಲರ ಸಂಘಗಳಿಗೆ ‘ಸುಪ್ರೀಂ’ ನೋಟಿಸ್

ದೆಹಲಿ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೋರಿ ದೆಹಲಿ ವಕೀಲರ ಪರಿಷತ್‌ ಹಾಗೂ ದೇಶದ ಎಲ್ಲಾ ವಕೀಲರ ಸಂಘಗಳಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಸೆ.20) ನೋಟಿಸ್‌ ಜಾರಿ ಮಾಡಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ನಿಗದಿಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಕೀಲರ ಸಂಘಗಳ ಚುನಾವಣಾ ಪ್ರಚಾರ ಈಗಾಗಲೇ ನಡೆಯುತ್ತಿರುವುದರಿಂದ ಶೀಘ್ರವೇ ಅರ್ಜಿ ವಿಚಾರಣೆ ನಡೆಸುವಂತೆ ಕಕ್ಷಿದಾರರೊಬ್ಬರ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ, ಅದಕ್ಕೆ ನಿರಾಕರಿಸಿರುವ ನ್ಯಾಯಾಲಯ, ಬದಲಿಗೆ ಚುನಾವಣೆಗಳಿಗೆ ಹಣ ಖರ್ಚು ಮಾಡುವುದನ್ನು ನಿಲ್ಲಿಸುವಂತೆ ವಕೀಲದ ಸಂಘಗಳ ಕಿವಿ ಹಿಂಡಿದೆ. “ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಸದಸ್ಯರು ಮತ ಚಲಾಯಿಸಲಿ ಬಿಡಿ” ಎಂದಿದೆ.

ದೆಹಲಿಯ ಎಲ್ಲಾ ಜಿಲ್ಲಾ ವಕೀಲರ ಸಂಘಗಳಲ್ಲಿ ಮತ್ತು ದೆಹಲಿ ಹೈಕೋರ್ಟ್ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಮೊದಲ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡದೆ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದ ಹಿನ್ನೆಲೆ, ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಜಿಲ್ಲಾ ವಕೀಲರ ಸಂಘಗಳಲ್ಲಿನ ಮೀಸಲಾತಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣವನ್ನೂ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ತಿಳಿಸಿದ ನ್ಯಾಯಾಲಯ, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ನೋಟಿಸ್‌ ನೀಡಿದೆ ಎಂದು ಬಾರ್ & ಬೆಂಚ್ ಹೇಳಿದೆ.

ಕೃಪೆ : ಬಾರ್ & ಬೆಂಚ್

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ