Monday, September 23, 2024

ಪ್ರಾಯೋಗಿಕ ಆವೃತ್ತಿ

ರೇಣುಕಸ್ವಾಮಿ ಕೊಲೆ ಪ್ರಕರಣ| ದರ್ಶನ್ ಗ್ಯಾಂಗಿನ ಮೂವರಿಗೆ ಜಾಮೀನು ಮಂಜೂರು

ನಟ ದರ್ಶನ್ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಕೇಶವಮೂರ್ತಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರಕರಣದ ಇತರ ಇಬ್ಬರು ಆರೋಪಿಗಳಾದ ನಿಖಿಲ್ ನಾಯ್ಕ್ ಮತ್ತು ಕಾರ್ತಿಕ್ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಕೂಡಾ ಜಾಮೀನು ಮಂಜೂರು ಮಾಡಿದೆ.

ಮತ್ತೊಂದೆಡೆ, ಬೆಂಗಳೂರಿನ 57 ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮತ್ತು ಅವರ ಸ್ನೇಹಿತೆ ಮತ್ತು ನಂಬರ್ 1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 25 ಕ್ಕೆ ಮುಂದೂಡಿದೆ. ದರ್ಶನ್ ಸೆಪ್ಟೆಂಬರ್ 21ರ ಶನಿವಾರ ಜಾಮೀನು ಅರ್ಜಿ ಸಲ್ಲಿಸಿದ್ದರು. ರೇಣುಕಾಸ್ವಾಮಿ ಹತ್ಯೆSEO title preview:

ನಟ ದರ್ಶನ್ ತೂಗುದೀಪ ಮತ್ತು ಅವರ ಸ್ನೇಹಿತೆ ಪವಿತ್ರ ಸೇರಿದಂತೆ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಸೆಪ್ಟೆಂಬರ್ 4 ರಂದು ಪೊಲೀಸರು 3,991 ಪುಟಗಳ ಪ್ರಾಥಮಿಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಜಾಮೀನು ಸಿಕ್ಕ ಆರೋಪಿಗಳಾದ ಕಾರ್ತಿಕ್ (ಆರೋಪಿ ಸಂಖ್ಯೆ – ಎ 15), ಕೇಶವಮೂರ್ತಿ (ಎ 16) ಮತ್ತು ನಿಖಿಲ್ ನಾಯ್ಕ್ (ಅ 17) ತುಮಕೂರು ಜೈಲಿನಲ್ಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ

ನಟ ದರ್ಶನ್ ಅಭಿಮಾನಿಯಾದ 33 ವರ್ಷದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದನು. ಇದು ದರ್ಶನ್ ಅವರನ್ನು ಕೆರಳಿಸಿದ್ದು, ನಂತರ ರೇಣುಕಾಸ್ವಾಮಿಯ ಕೊಲೆ ಮಾಡಲಾಯಿತು ಎಂದು ಹೇಳಲಾಗಿದೆ. ಜೂನ್ 9 ರಂದು ಬೆಂಗಳೂರಿನ ಸುಮನಹಳ್ಳಿಯ ಅಪಾರ್ಟ್‌ಮೆಂಟ್ ಪಕ್ಕದ ಮಳೆನೀರು ಚರಂಡಿ ಬಳಿ ಅವರ ಶವ ಪತ್ತೆಯಾಗಿತ್ತು.

ದರ್ಶನ್ ಅಭಿಮಾನಿಗಳ ಚಿತ್ರದುರ್ಗದ ಸಂಘದ ಭಾಗವಾಗಿರುವ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ ಎಂಬಾತ ದರ್ಶನ್‌ ಭೇಟಿಯಾಗಲು ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್ ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಅದೇ ಶೆಡ್‌ನಲ್ಲಿಯೇ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ನಂಬರ್ ಒನ್ ಆರೋಪಿ ಪವಿತ್ರಾ ಅವರೇ ರೇಣುಕಾಸ್ವಾಮಿ ಹತ್ಯೆಗೆ ಪ್ರಮುಖ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ. ಇತರ ಆರೋಪಿಗಳಿಗೆ ಪ್ರಚೋದನೆ ನೀಡಿ, ಅವರೊಂದಿಗೆ ಸಂಚು ರೂಪಿಸಿ ಅಪರಾಧದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!