Wednesday, September 25, 2024

ಪ್ರಾಯೋಗಿಕ ಆವೃತ್ತಿ

ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿ ಕುತಂತ್ರ ನಡೆಸಿದೆ : ಡಿ.ಕೆ.ಶಿವಕುಮಾರ್

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಷಡ್ಯಂತ್ರ ನಡೆಸಿದೆ. ಮುಡಾ ಪ್ರಕರಣದಲ್ಲಿ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ನಾವು ಇದನ್ನು ಕಾನೂನು ಪ್ರಕಾರವೇ ಎದುರಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ, ‘ಹೈಕೋರ್ಟ್ ತೀರ್ಪಿನಲ್ಲಿ ಏನಿದೆ ಎಂಬುದನ್ನು ನೋಡಿ ಮಾತನಾಡುವೆ ತನಿಖೆಗೆ ಹೈಕೋರ್ಟ್ ಒಪ್ಪಿದೆ. ಆದರೆ ಸಿದ್ದರಾಮಯ್ಯ ಅವರು ತಪ್ಪೇ ಮಾಡಿದ್ದಾರೆ ಎಂದು ಹೈಕೋರ್ಟ್ ಹೇಳಿಲ್ಲ. ತನಿಖೆ ನಡೆದು ನಮ್ಮ ಮುಖ್ಯಮಂತ್ರಿಗಳಿಗೆ ಕ್ಲೀಟ್ ಚೀಟ್ ಸಿಗಲಿದೆ” ಎಂದರು.

“ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಜನಪರವಾಗಿ ಸಿದ್ದರಾಮಯ್ಯ ಅವರು ಕೊಟ್ಟ ಕಾರ್ಯಕ್ರಮಗಳನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಮಗೆ ಈಗಲೂ ಭರವಸೆ ಇದೆ; ನಮ್ಮ ಸಿದ್ದರಾಮಯ್ಯ ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಅವರ ಜೊತೆ ನಾವಿದ್ದೇವೆ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!