Wednesday, September 25, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 25 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪದ್ಮಭೂಷಣ ಪುರಸ್ಕೃತ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಾಗಮಂಗಲದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲ್ಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!