Wednesday, September 25, 2024

ಪ್ರಾಯೋಗಿಕ ಆವೃತ್ತಿ

ಏಡ್ಸ್ ಟ್ರ್ಯಾಪ್ ಪ್ರಕರಣ| ಎಸ್ಐಟಿ ವಶಕ್ಕೆ ಬಿಜೆಪಿ ಶಾಸಕ ಮುನಿರತ್ನ

ಬಿಜೆಪಿ ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಡ್‌ ಮುನಿರತ್ನ ನಾಯ್ಡು ನನ್ನು 14 ದಿನಗಳ ಕಾಲ SIT ಕಸ್ಟಡಿಗೆ ನೀಡಿದೆ.

ವಿಚಾರಣೆ ನಡೆಸಿದ 42ನೇ ACMM ಕೋರ್ಟ್, ಮುನಿರತ್ನ ನನ್ನು 12 ದಿನಗಳ ಕಾಲ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.

ದೂರುದಾರರ ಪ್ರಕಾರ, ಶಾಸಕರು ತಮ್ಮೊಂದಿಗಿನ ಸಂಭಾಷಣೆಯ ಸಮಯದಲ್ಲಿ, ತಮ್ಮ ರಾಜಕೀಯ ಪ್ರತಿಸ್ಪರ್ಧಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ ಮಹಿಳೆ ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಎಚ್‌ಐವಿ ಸೋಂಕಿತ ಮಹಿಳೆಯನ್ನು ಬಳಸಿಕೊಂಡು ಇನ್ನೊಬ್ಬ ವ್ಯಕ್ತಿಯನ್ನು ಬಲೆಗೆ ಬೀಳಿಸಲು ಸಹಾಯ ಮಾಡುವಂತೆ ಶಾಸಕರು ಕೇಳಿದ್ದರು. ಆದರೆ, ದೂರುದಾರರು ಅದಕ್ಕೆ ನಿರಾಕರಿಸಿದ್ದಾರೆ. ಅತ್ಯಾಚಾರದ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು, ಶಾಸಕರು ತಮ್ಮ ವಿರೋಧಿಗಳನ್ನು ಬಲೆಗೆ ಬೀಳಿಸಲು ಬಳಸಿದ್ದಾರೆ ಎನ್ನಲಾದ ಎಚ್‌ಐವಿ ಸೋಂಕಿತ ಮಹಿಳೆಯರನ್ನು ಈಗ ಗುರುತಿಸಬೇಕಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!