Wednesday, September 25, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯ ವಿರುದ್ದ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ

ಮೈಸೂರು ನಗರಾಭಿವೃದ್ಧಿ ಪ್ರಧಿಕಾರ (ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್‌ಪಿಸಿ ಸೆ1563) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮಂಗಳವಾರ ಈ ಬಗ್ಗೆ ತೀರ್ಪು ಪ್ರಕಟಿಸಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್ ತೀರ್ಪು ಹಿಡಿದುಕೊಂಡು ದೂರುದಾರರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಾಹಂ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ. ತನಿಖೆ ನಡೆಸಲು ಸೂಚಿಸಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ಕೋರಿದ್ದರು.

ಬುಧವಾರ ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಯನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಕಾಯ್ದೆ ಅಡಿಯಲ್ಲಿ ನಡೆಸಬೇಕೊ ಅಥವಾ ಭಾರತೀಯ ನ್ಯಾಯ ಸುರಕ್ಷಾ ಸಂಹಿತ (ಬಿಎನ್‌ಎಸ್‌ಎಸ್) ಕಾಯ್ದೆ ಅಡಿಯಲ್ಲಿ ನಡೆಸಬೇಕೊ ಎಂಬ ಜಿಜ್ಞಾಸೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವ್ಯಕ್ತಪಡಿಸಿ ಕೆಲಕಾಲ ವಿಚಾರಣೆ ಮುಂದೂಡಿತ್ತು. ಈಗ ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್‌ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!