Friday, September 27, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಕೆಲಸ ಬಹಿಷ್ಕರಿಸಿ ಮಂಡ್ಯ ನಗರದ ತಾಲ್ಲೂಕು ಕಚೇರಿ ಎದುರು ಗುರುವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.ಮುಷ್ಕರಕ್ಕೆ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಬಾಹ್ಯ ಬೆಂಬಲ ಸೂಚಿಸಲಾಯಿತು.

ಮಂಡ್ಯ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ. ತಮ್ಮಣ್ಣಗೌಡ ಮಾತನಾಡಿ, ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆ, ಬಗರ್ ಹುಕ್ಕಂ ಭೂಮಿ ಗುರುತು ಮಾಡುವುದು ಸೇರಿದಂತೆ ಸುಮಾರು 17 ಮೊಬೈಲ್ ಅಫ್‌ಗಳನ್ನು ಸೃಜಿಸಿ, ಕೆಲಸ ಮಾಡು ವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ. ಆದರೆ ಈ ಮೊಬೈಲ್ ಅಫ್‌ಗಳ ಅಪರೇಷನ್ ಮಾಡಲು ಅಗತ್ಯವಿರುವ ಅಧುನಿಕ ತಂತ್ರಜ್ಞಾನ ಒಳಗೊಂಡ ಮೊಬೈಲ್ ಆಗಲಿ, ಅದಕ್ಕೆ ಬೇಕಾದ ಇಂಟರನೆಟ್ ಸೌಲಭ್ಯ, ಪ್ರಿಂಟರ್ ಯಾವ ಪರಿಕರಗಳನ್ನು ನೀಡದೆ,ಕೆಲಸ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.

ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದರು.

ಕ್ಷೇತ್ರಗಳಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಯಾವುದೇ ರೀತಿಯ ಮೂಲಭೂತ ಸೌಲಭ್ಯ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ, ಕೆಲಸದ ಒತ್ತಡವು ಹೆಚ್ಚಾಗಿದ್ದು ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆತಿಲ್ಲ.ಕೆಲಸದ ಒತ್ತಡದಿಂದ ಕಾರ್ಯನಿರ್ವಹಿಸಲು ಆಗದೆ ಅಧಿಕಾರಿಗಳು ಸಾವು ನೋವು ಉಂಟಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಕೆಲಸ ನಿರ್ವಹಿಸುತ್ತಿದ್ದು, ನಮಗೆ ಸರ್ಕಾರ ಯಾವುದೇ ರೀತಿಯ ಸೌಲಭ್ಯ ನೀಡುತ್ತಿಲ್ಲ ಆದ್ದರಿಂದ ಮುಷ್ಕರ ಕೈಗೊಳ್ಳಲಾಗಿದೆ ಹೇಳಿದರು.

ಕಂದಾಯ ಇಲಾಖೆ ನೌಕರರು ಒಗ್ಗಟ್ಟಾಗಬೇಕು.ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಎರಡು ದಿವಸಗಳ ಕಾಲಾವಕಾಶ ಕೊಟ್ಟು ನೋಡೋಣ. ನಂತರ ರಾಜ್ಯ ಸಂಘದ ಸಭೆ ಕರೆದು ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಸ್ತಬ್ದ ಆಗುವ ರೀತಿ ಹೋರಾಟ ಮಾಡಲು ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಮುಷ್ಕರದಲ್ಲಿ ಮಂಡ್ಯ ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿ.ವೆಂಕಟೇಶ್, ಖಜಾಂಚಿ ಎಸ್. ಮಹೇಶ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮಂಡ್ಯ ತಾಲೂಕು ಅಧ್ಯಕ್ಷ ಕುಮಾರ್ ಸೇರಿದಂತೆ ಕಂದಾಯ ಇಲಾಖೆ ನೌಕರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!