Friday, September 27, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಅಭಿನಂದನೆ

ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್, ನೆಲದನಿ ಅಲಯನ್ಸ್ ಸಂಸ್ಥೆ, ಪರಿಸರ ಅಲಯನ್ಸ್‌ ಸಂಸ್ಥೆ ಸೇರಿದಂತೆ ಹತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಾಷ್ಟ್ರೀಯ ರಕ್ತದಾನಿಗಳ ದಿನದ ಅಂಗವಾಗಿ ಸೆ.28ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಅಭಿನಂದನೆ ಸಮಾರಂಭ ನಡೆಯಲಿದೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಮಿಮ್ಸ್ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ್, ನಿರ್ದೇಶಕ ಡಾ.ನರಸಿಂಹಸ್ವಾಮಿ ಹಾಗೂ ನೆಲದನಿ ಬಳಗದ ಪೋಷಕರಾದ ರುಕ್ಮಿಣಿ ಶಂಕರೇಗೌಡ ಭಾಗವಹಿಸುವರು.

ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಿ ರಕ್ತದಾನ ಮಾಡುವಂತೆ ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಸಂಸ್ಥೆಯ ರಾಜ್ಯಪಾಲ ಕೆ.ಟಿ.ಹನುಮಂತು ಹಾಗೂ ನೆಲದನಿ ಸಂಸ್ಥೆಯ ಅಧ್ಯಕ್ಷ ಲಂಕೇಶ್ ಮಂಗಲ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನದ ಮಹತ್ವ

ವ್ಯಕ್ತಿಯ ಜೀವನದಲ್ಲಿ ರಕ್ತದ ಅಗತ್ಯತೆ ಮತ್ತು ಪ್ರಾಮುಖ್ಯತೆಯನ್ನು ಹಂಚಿಕೊಳ್ಳಲು ಪ್ರತಿ ವರ್ಷ ಅಕ್ಟೋಬರ್ 1 ರಂದು ಭಾರತದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಮೊದಲು 1975 ರಲ್ಲಿ ಅಕ್ಟೋಬರ್ 1 ರಂದು ಇಂಡಿಯನ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್‌ಪ್ಯೂಷನ್ ಮತ್ತು ಇಮ್ಯುನೊಹೆಮಟಾಲಜಿ ಮೂಲಕ ಆಚರಿಸಲು ಪ್ರಾರಂಭಿಸಲಾಯಿತು.

ಇಂಡಿಯನ್ ಸೊಸೈಟಿ ಆಫ್ ಮತ್ತು ಇಮ್ಯುನೊಹೆಮಟಾಲಜಿಯನ್ನು ಮೊದಲ ಬಾರಿಗೆ 1971 ರ ಅಕ್ಟೋಬರ್ 22 ರಂದು ಕೆ. ಸ್ವರೂಪ್ ಕ್ರಿಶನ್ ಮತ್ತು ಡಾ. ಜೆ.ಜಿ. ಜಾಲಿ ನೇತೃತ್ವದಲ್ಲಿ ಸ್ಥಾಪಿಸಲಾಯಿತು.

ಸ್ವಯಂಪ್ರೇರಿತ ರಕ್ತದಾನದ ಮಹತ್ವದ ಬಗ್ಗೆ ದೇಶಾದ್ಯಂತ ಜನರಿಗೆ ಅರಿವು ಮೂಡಿಸುವುದು. ಅಗತ್ಯವಿರುವ ರೋಗಿಗಳ ತುರ್ತು ಅಗತ್ಯವನ್ನು ಪೂರೈಸಲು ಸ್ವಯಂಪ್ರೇರಿತ ರಕ್ತದಾನದ ಗುರಿಯನ್ನು ಯಶಸ್ವಿಯಾಗಿ ಸಾಧಿಸುವುದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನದ ಮುಖ್ಯ ಉದ್ದೇಶವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!