Friday, September 27, 2024

ಪ್ರಾಯೋಗಿಕ ಆವೃತ್ತಿ

ಡಿನೋಟಿಫಿಕೇಷನ್ ಪ್ರಕರಣ| ಲೋಕಾಯುಕ್ತ ಮುಂದೆ ಹಾಜರಾದ HDK ಗೆ ತೀವ್ರ ವಿಚಾರಣೆ

ಬೆಂಗಳೂರಿನ ಗಂಗಾನಗರದಲ್ಲಿ 111 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರು ಗಂಗಾನಗರದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಆ ಭೂಮಿಯನ್ನು ಡಿನೋಟಿಫೈ ಮಾಡಲು ರಾಜಶೇಖರಯ್ಯ ಎಂಬವರ ಹೆಸರಿನಲ್ಲಿ 2007ರಲ್ಲಿ ಬೇನಾಮಿ ಅರ್ಜಿ ಸಲ್ಲಿಕೆಯಾಗಿತ್ತು. ಅಗ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಕುಮಾರಸ್ವಾಮಿ ಅವರೇ ಬೇನಾಮಿ ಅರ್ಜಿ ಪಡೆದಿದ್ದರು ಎಂದೂ ಹೇಳಲಾಗಿದೆ. ಜೊತೆಗೆ, ತಮ್ಮ ಅತ್ತ ವಿಮಲಾ ಹೆಸರಿನಲ್ಲಿ ಜಿಪಿಎ ಮಾಡಿಸಲಾಗಿತ್ತು.

“>

 

ಆ ನಂತರ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ, 2010ರಲ್ಲಿ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿ, ಅದೇಶ ಹೊರಡಿಸಿದ್ದರು. ಡಿನೋಟಿಫೈ ಆದ ಭೂಮಿಯನ್ನು ಕುಮಾರಸ್ವಾಮಿ ಅವರು ಬಾಮೈದ ಟಿ.ಎಸ್ ಚನ್ನಪ್ಪ ಹೆಸರಿಗೆ ನೋಂದಣಿ ಮಾಡಿಕೊಡಲಾಗಿತ್ತು.

ಈ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಯಡಿಯೂರಪ್ಪ ಎ1 ಆರೋಪಿಯಾಗಿದ್ದರೆ, ಕುಮಾರಸ್ವಾಮಿ ಅವರು ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಲೋಕಾಯುಕ್ತ ಸೆಪ್ಟೆಂಬರ್ 21ರಂದು ಯಡಿಯೂರಪ್ಪ ಅವರಿಗೆ ನೋಟಿಸ್‌ ಜಾರಿ ಮಾಡಿ. ವಿಚಾರಣೆಗೆ ಒಳಪಡಿಸಿತ್ತು ಅಲ್ಲದೆ, 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿಕೊಂಡಿದ್ದರು.

ಇದೀಗ ಇಂದು (ಶುಕ್ರವಾರ) ಕುಮಾರಸ್ವಾಮಿ ಅವರನ್ನೂ ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮುಗದಂ ಅವರು ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಎಲ್ಲರೂ ಮರೆತು ಹೋಗಿದ್ದ ಈ ಹಗರಣವನ್ನು ದಾಖಲೆಗಳ ಸಮೇತ ಈದಿನ.ಕಾಮ್ ಬಯಲಿಗೆಳಿದಿದೆ. ಈ ಬೆನ್ನಲ್ಲೇ, ಹಗರಣದ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಚುರುಕುಗೊಳಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!