Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| 7ನೇ ವೇತನ ಆಯೋಗದ ಲೆಕ್ಕಚಾರದಲ್ಲಿ ರಜೆ ನಗದೀಕರಣದ ಮೊತ್ತ ನೀಡಲು ಆಗ್ರಹ

ಜು.1,2022ರಿಂದ ಜು.31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಪರಿಷ್ಕತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿ ಮಂಡ್ಯದಲ್ಲಿ  ಪ್ರತಿಭಟನೆ ನಡೆಸಿದರು.

ನಮಗೆ ನಷ್ಟವಾದ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ಡಿ.ಸಿ.ಆರ್.ಜಿ., ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರಗಳ ಮೂಲಕ ಮನವಿ ಪತ್ರಗಳನ್ನು ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ, ರವಿಶಂಕರ್, ಸ್ವಾಮಿಗೌಡ, ಚನ್ನರಾಜು, ನಾಗಮಲ್ಲೇಶ್ ಹಾಗೂ ಮಹದೇವ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!