Friday, October 18, 2024

ಪ್ರಾಯೋಗಿಕ ಆವೃತ್ತಿ

ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲ ನ್ಯಾಯಾಲಯಗಳಿಗಿಂತ ಮಿಗಿಲಾದದ್ದು; ಸಿಎಂ ಸಿದ್ದರಾಮಯ್ಯ

ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿ ಅವರು ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು, ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟಿಷರು ಭಾರತದಿಂದ ಹೋಗುವಂತೆ ಮಾಡಿದರು ಎಂದು ತಿಳಿಸಿದರು.

ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ. ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ಧಾರ ಆಗದೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!