Sunday, October 20, 2024

ಪ್ರಾಯೋಗಿಕ ಆವೃತ್ತಿ

ಅಂತರಾಷ್ಟ್ರೀಯ ಬಾಹ್ಯಾಕಾಶ ಸಪ್ತಾಹ ಕಾರ್ಯಕ್ರಮ

ಶ್ರೀಲೀಲಾ ನಾಗರಾಜಪ್ಪ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಸ್ರೋ ಸಹಯೋಗದೊಂದಿಗೆ ಅಕ್ಟೋಬರ್ 5ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಮಳವಳ್ಳಿ ತಾಲೂಕಿನ ಹಲಗೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಅಂತರಾಷ್ಟ್ರೀಯ ಬಾಹ್ಯಾಕಾಶ ಸಪ್ತಾಹ-2024 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅಶ್ವಿನ್‌ಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಹಲಗೂರು ಹೋಬಳಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಭಾಗವಹಿಸಲಿದ್ದು, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಇಸ್ರೋದ ಹಿರಿಯ ವಿಜ್ಞಾನಿ ರಮಣಗೌಡ ವಿ.ನಾಡಗೌಡ, ಮತ್ತೋರ್ವ ವಿಜ್ಞಾನಿ ಆನಂದ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ.ವಿ.ಇ., ಟ್ರಸ್ಟ್ ಅಧ್ಯಕ್ಷ ಅಶ್ವಿನ್‌ಕುಮಾರ್ ಹೆಚ್.ವಿ ಉಪಸ್ಥಿತರಿರುವರು ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಂತರಿಕ್ಷ ವಿಜ್ಞಾನ, ರಾಕೆಟ್ ವಿಜ್ಞಾನ, ಇಸ್ರೋನ ಯಶಸ್ಸಿನ ಹಾದಿ, ವಸ್ತು ಪ್ರದರ್ಶನ ಹಾಗೂ ಮಕ್ಕಳಿಗೆ ರಸಪ್ರಶ್ನೆ, ಆಶುಭಾಷಣ ಸ್ಪರ್ಧೆ, ಮಕ್ಕಳಿಂದ ವಿಜ್ಞಾನಕ್ಕೆ ಸಂಬಂಧಿಸಿದಂತೆ ವಸ್ತು ಪ್ರದರ್ಶನ ನಡೆಯಲಿದ್ದು, ಗೆದ್ದವರಿಗೆ ಪ್ರಶಸ್ತಿ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಶಶಿ, ರಮೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!