Sunday, October 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.17ರಂದು ಅರ್ಥಪೂರ್ಣ ವಾಲ್ಮೀಕಿ ಜಯಂತಿ ಆಚರಣೆ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಶ್ರೀಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಸಾಧನೆ ಅಪಾರ. ಅವರ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಸಂಘ ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ಜನರನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿಸಬೇಕು ಎಂದು ಹೇಳಿದರು.

ಅಕ್ಟೋಬರ್ 17 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಿಲ್ವರ್ ಜುಬಿಲಿ ಪಾರ್ಕ್ ನಿಂದ ಜಿಲ್ಲಾ ಪಂಚಾಯತ್ ವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದವರಿಗೆ ಸನ್ಮಾನ ಮಾಡಲಾಗುವುದು ಮತ್ತು ಕೃಷಿ, ಶಿಕ್ಷಣ ಹಾಗೂ ಸಾಹಿತ್ಯ ಸೇರಿದಂತೆ ಒಟ್ಟು ಐದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯಾಗಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆಯ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೆ.ಎನ್ ಕೇಶವಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಡಾ. ಸಿದ್ದಲಿಂಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಬಿ.ಇ.ಒ ಮಹಾದೇವ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್ ಎಸ್.ಎಸ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯ, ನಗರಸಭೆ ಪರಿಸರ ಅಭಿಯಂತರರು ರುದ್ರೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!