Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ

ಮಂಡ್ಯ ತಾಲೂಕಿನ ಚನ್ನಪ್ಪನ ದೊಡ್ಡಿ ಗ್ರಾಮದಲ್ಲಿ ಸಂಪೂರ್ಣ ಅಂತರರಾಷ್ಟ್ರೀಯ ಕೃಷಿ ವಿಜ್ಞಾನ ಮತ್ತು ತೋಟಗಾರಿಕೆ ತಂತ್ರಜ್ಞಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬಂಧಿತ ಇಲಾಖೆಗಳು ಸಹಯೋಗದಲ್ಲಿ ಅಂತಿಮ ವರ್ಷದ ಬಿ.ಎಸ್ಸಿ (ಹಾನರ್ಸ್) ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ ಜರುಗಿತು.

ಕೃಷಿ ಮತ್ತು ಪ್ರದರ್ಶನ ಹಾಗೂ ನೂತನ ತಳಿಗಳ ಪ್ರಾತ್ಯಕ್ಷಿಕೆಯ ಕಾರ್ಯಕ್ರಮವು ಸಂಪೂರ್ಣ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ.ಸಂಪೂರ್ಣ ನಾಯ್ಡು ಅಧ್ಯಕ್ಷತೆಯಲ್ಲಿ ಜರುಗಿತು. ವಸ್ತು ಪ್ರದರ್ಶನದ ಮಳಿಗೆಗಳು ಹಾಗೂ ಪ್ರಾತ್ಯಕ್ಷಿಕೆಗಳ ಉದ್ಘಾಟನಾ ಸಮಾರಂಭವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ಪಿ. ಸುರೇಶ್ ನೆರವೇರಿಸಿದರು.

ವಸ್ತು ಪ್ರದರ್ಶನದ ಕಾರ್ಯಕ್ರಮವನ್ನು ಸಂಪೂರ್ಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಬಿಎಸ್.ಎಂ ನಾಯ್ಡು  ಉದ್ಘಾಟಿಸಿದರು. ಸಂಪೂರ್ಣ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಎಸ್.ಎನ್. ವಾಸುದೇವನ್, ಸಂಪೂರ್ಣ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿನಯ್ .ಬಿ ರಾಘವೇಂದ್ರ, ಮಂಡ್ಯ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ವಿ. ಎನ್. ಅಶೋಕ್, ಬೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುವರ್ಣಾವತಿ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!