Saturday, October 19, 2024

ಪ್ರಾಯೋಗಿಕ ಆವೃತ್ತಿ

ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ನರೇಂದ್ರಸ್ವಾಮಿ

ಕ್ರೀಡೆಯಲ್ಲಿ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮನವಾಗಿ ಸ್ವೀಕರಿಸಬೇಕು, ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಸಮಚಿತ್ತದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಶ್ರೀ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ನಡೆದ 14 ಮತ್ತು 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಭಾಗವಹಿಸಿದರೇ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ, ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆಯಬೇಕೆಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೂಲಕ ಸಾಧಕರಾಗುವ ಅವಕಾಶಗಳು ಸಾಕಷ್ಟು ಇದ್ದು, ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕಿದೆ, ಶಿಕ್ಷಕರು ಮತ್ತು ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಮುಂದಾಗಬೇಕೆಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಉಪನಿರ್ಧೆಶಕ (ಅಭಿವೃದ್ದಿ) ಪುರುಷೋತ್ತಮ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್. ಲಿಂಗರಾಜು, ಪುರಸಭೆ ಸದಸ್ಯ ನೂರುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು, ಕ್ಷೇತ್ರ ಸಮಾನ್ವಯಾಧಿಕಾರಿ ಎಂ.ಕೆ ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!