Saturday, October 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದ 15 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಧಾರಾಕಾರ ಮಳೆ

ಮುಂದಿನ ಮೂರು ದಿನಗಳವರೆಗೆ ಅಂದರೆ ಅ.10ರವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾವೋಕು ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್‌ಡಿ ಕೋಟೆ, ಮುಂಡಗೋಡು, ಕುಮಟಾ, ಲಕ್ಷೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಯಲ್ಲಾಪುರ, ಸುಳ್ಯ ಕಿರವತ್ತಿ, ಉಪ್ಪಿನಂಗಡಿ, ಗಂಗಾವತಿ, ಮೈಸೂರು, ನಾಗಮಂಗಲದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!