Saturday, October 19, 2024

ಪ್ರಾಯೋಗಿಕ ಆವೃತ್ತಿ

ವಿಜಯೇಂದ್ರ ಮೊದಲು ಫೋಕ್ಸೋ ಪ್ರಕರಣದ ಆರೋಪಿ ತನ್ನ ತಂದೆಯಿಂದ ರಾಜೀನಾಮೆ ಪಡೆಯಲಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಫೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿರುವ ತಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಅವರಿಂದ ಮೊದಲು ರಾಜೀನಾಮೆ ಪಡೆಯಲಿ’ ನಂತರ ನನ್ನ ರಾಜೀನಾಮೆ ಕೇಳಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯದಿರುವ ವಿಜಯೇಂದ್ರ ಮೊದಲು, ತಮ್ಮ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

‘ದಸರಾ ಆರಂಭಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾಗುತ್ತಾರೆ’ ಎನ್ನುತ್ತಿದ್ದರು. ದಸರಾ ಮುಗಿದಿದ್ದು, ಇದೀಗ ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು ಎನ್ನುತ್ತಿರುವ ವಿಜಯೇಂದ್ರ ಅವರೇನು ಜ್ಯೋತಿಷಿಯೇ? ಇಲ್ಲವೇ ಪುರೋಹಿತನೇ? ಎಂದು ಕಿಡಿಕಾರಿದರು.

ಬಿಜೆಪಿಗೆ ರಾಜ್ಯದ ಅಭಿವೃದ್ಧಿ ಬೇಕಾಗಿಲ್ಲ. ಕ್ಷುಲ್ಲಕ ಕಾರಣಗಳನ್ನು ಇಟ್ಟುಕೊಂಡು ಅನ್ಯಾಯದ ಪರ ನಿಲ್ಲುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿರ್ಚಿಸದೇ ಬರೀ ಕೋಮುವಾದವನ್ನೇ ಅವಲಂಭಿಸಿ ರಾಜಕಾರಣ ಮಾಡುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆಯಲ್ಲಿರುವ ಭಾರತದಲ್ಲಿ ಕೇಂದ್ರ ‌ಸರಕಾರವು ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ನೀಡಿಲ್ಲ. ರಾಜ್ಯಕ್ಕೆ ಅನ್ಯಾಯವಾದರೂ ಬಿಜೆಪಿ ಸಂಸದರು ಕೇಂದ್ರ ಸರಕಾರವನ್ನು ಕೇಳುತ್ತಿಲ್ಲ ಎಂದು ಕಿಡಿಕಾರಿದರು.

ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಕರೆ ನೀಡಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!