Friday, October 18, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಸಚಿವ ಸಂಪುಟದಲ್ಲಿ ಒಳಮೀಸಲಾತಿ ಕುರಿತು ಚರ್ಚಿಸಲು ಆಗ್ರಹ

ಸುಪ್ರೀಂಕೋರ್ಟ್ ತೀರ್ಪಿನಂತೆ ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೆ ತರಬೇಕೆಂದು ಅಖಿಲ ಕರ್ನಾಟಕ ಡಾ. ಬಾಬುಜಗಜೀವನರಾಮ್ ಸಂಘಗಳ ಒಕ್ಕೂಟದಿಂದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮದ್ದೂರಿನಲ್ಲಿ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಎನ್.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಹಲವರು, ಮುಂಬರುವ ಅ.25ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ವಿಚಾರವನ್ನು ಚರ್ಚೆ ನಡೆಸಬೇಕೆಂದು ಆಗ್ರಹಿಸಿದರು.

ಒಳಮಿಸಲಾತಿ ಜಾರಿಗೆ ಎಡ-ಬಲ ಜನಾಂಗದವರು ಒಪ್ಪಿರುವುದರಿಂದ ಹಾಗೂ ಪರಿಶಿಷ್ಟ ಜಾತಿಯ 101 ಉಪ ಜಾತಿಗಳಿಗೂ ಅನೂಕೂಲವಾಗುವ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು, ಸುಪ್ರೀಂಕೋರ್ಟ್ ತೀರ್ಪು ನೀಡಿರುವಂತೆ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿ ತರಲು ತೀರ್ಮಾನಿಸಿದೆ ಹಾಗೂ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸಹ ಒಳಮೀಸಲಾತಿ ನೀಡುವುದಾಗಿ ಪ್ರಕಟಿಸಲಾಗಿದೆ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬದ್ದವಾಗಿದ್ದಾರೆ. ಈಗ ಯಾವ ಡಾಟಾ ದ ಆಧಾರದ ಮೇಲೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರ ಜೊತೆ ಚರ್ಚಿಸಿ ಒಳಮೀಸಲಾತಿ ಜಾರಿ ತರಲು ಸರ್ಕಾರ ಬದ್ಧವಾಗಿದೆ ಎಂದ ಅವರು, ವಿರೋಧ ಪಕ್ಷಗಳು ತಾವು ಅಧಿಕಾರದಲ್ಲಿದಾಗ, ಒಳಮೀಸಲಾತಿ ನೀಡದ ಜನತಾದಳ, ಹಾಗೂ ಬಿಜೆಪಿ ಪಕ್ಷಗಳು ಅನುಕಂಪದ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎನ್ ಆರ್ ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮದ್ದೂರು ತಾಲ್ಲೂಕು ಅಧ್ಯಕ್ಷರಾದ ಚಾಮನಹಳ್ಳಿ ಮಂಜು, ತಾ.ಪಂ. ಮಾಜಿ ಸದಸ್ಯ ಕುಚೇಲ, ಶಿವಕುಮಾರ್, ಆಲೂರು ಕುಮಾರ್ ಹಾಗೂ ನಿಡಘಟ್ಟ ಲೋಕೇಶ್ ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!