Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ಬಾಲಕಿಯ ಅತ್ಯಾಚಾರ- ಕೊಲೆ ಪ್ರಕರಣ| ಆರೋಪಿ ಟ್ಯೂಷನ್ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಕಳೆದ ಅಕ್ಟೋಬರ್ 10, 2022ರಲ್ಲಿ ಮಳವಳ್ಳಿ ಪಟ್ಟಣದಲ್ಲಿ ನಡೆದ 10 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಟ್ಯೂಷನ್ ಶಿಕ್ಷಕ ಕಾಂತರಾಜು(52) ಗೆ ಮಂಡ್ಯ ಜಿಲ್ಲಾ 1ನೇ ತ್ವರಿತಗತಿ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿ ತೀರ್ಪು ನೀಡಿದೆ.

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಡೆಸುತ್ತಿದ್ದ ಕಾಂತರಾಜು, ಟ್ಯೂಷನ್ ಗೆ ಬಂದ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸಮೀಪದಲ್ಲೇ ಇದ್ದ ಗಲ್ಲಿಯಲ್ಲಿ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ.

ಈ ಪ್ರಕರಣದ ತನಿಖೆ ಕೈಗೊಂಡಿದ್ದ ಮಳವಳ್ಳಿ ಪಟ್ಟಣ ಠಾಣೆಯ ಪೋಲಿಸರು ಕಾಂತರಾಜನನ್ನು ಬಂಧಿಸಿ ವಿಚಾರಣೆ ನಡೆಸಿ, ಹಲವು ಸಾಕ್ಷ್ಯಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮಂಡ್ಯ ಜಿಲ್ಲಾ 1ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಅಪರಾಧಿಗೆ ತೀರ್ಪು ಪ್ರಕಟಿಸಿದರು.

ಇದನ್ನೂ ಓದಿ : ಮಂಡ್ಯ| ಅತ್ಯಾಚಾರಿ, ಕೊಲೆಗಾರನಿಗೆ ಶಿಕ್ಷೆ ಕೊಡಿಸಿದ ವಿಶೇಷ ಅಭಿಯೋಜಕರಿಗೆ ಸನ್ಮಾನ- ಅಭಿನಂದನೆ

ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರುತ್ತಿದ್ದಂತೆ ಅತ್ಯಾಚಾರಕ್ಕೊಳಕ್ಕಾಗಿ ಕೊಲೆಯಾದ ಬಾಲಕಿಯ ಕುಟುಂಬದ ಪರವಾಗಿ ನ್ಯಾಯವಾದಿ ಬಿ.ಟಿ.ವಿಶ್ವನಾಥ್ ವಕಾಲತ್ತು ವಹಿಸುವುದಾಗಿ ಮಂಡ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸರ್ಕಾರವೇ ವಿಶೇಷ ಅಭಿಯೋಕರನ್ನಾಗಿ  ವಿ.ಎಸ್.ಭಟ್ ಅವರನ್ನು ನೇಮಕ ಮಾಡಿತ್ತು. ವಿ.ಎಸ್.ಭಟ್ ಅವರು ಸಮರ್ಥವಾಗಿ ವಾದ ಮಂಡಿಸಿ ಅಪರಾಧಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!