Wednesday, October 23, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಾದ್ಯಂತ 6 ದಿನಗಳ ಕಾಲ ಭಾರಿ ಮಳೆ | 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.

ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಇಂದು ನಗರದ ಪ್ರಾಥಮಿಕ, ಪ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಅ.23ರಂದು ಬುಧವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀತಿದೆ.

ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!