Wednesday, October 23, 2024

ಪ್ರಾಯೋಗಿಕ ಆವೃತ್ತಿ

ಪ್ರೊ. ಜೆಪಿ, ಡಾ.ಲತಾ, ಸಜಗೌ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಕುವೆಂಪು ಕಲಾನಿಕೇತನ ಸಂಸ್ಥೆಯ ವತಿಯಿಂದ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜ ಸೇವಾ ಮುಖಿಯಾಗಿ ಕಾರ್ಯ ನಿರ್ಹಿಸುತ್ತಿರುವ ಸಾಧಕರಿಗೆ ನೀಡಲಾಗುವ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್’ ಹೆಸರಿನ ವಿವಿಧ ಪ್ರಶಸ್ತಿಗೆ ನಾಡಿನ ಮೂರು ಮಂದಿ ಗಣ್ಯರು ಆಯ್ಕೆಯಾಗಿದ್ದಾರೆ.

ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ, ಕ್ರಿಯಾಶೀಲ ಸಂಘಟಕ, ರಂಗಕರ್ಮಿ ಹಾಗೂ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ. ಜಯಪ್ರಕಾಶ್ ಗೌಡ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯ ಹತ್ತು ಸಾವಿರ ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಅದೇ ರೀತಿ ಸಮಕಾಲೀನ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಏಳು ಮಹಾಕಾವ್ಯಗಳನ್ನು ರಚಿಸಿರುವ ಮಂಡ್ಯದ ಸುಪುತ್ರಿಯಾಗಿರುವ ಮೈಸೂರಿನ ನಿವಾಸಿ ಹಿರಿಯ ಕವಯಿತ್ರಿ ಹಾಗೂ ಕಾದಂಬರಿಗಾರ್ತಿ ಡಾ. ಲತಾ ರಾಜಶೇಖರ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಹಿತ್ಯ ರತ್ನ ಪ್ರಶಸ್ತಿ’ಗೂ ಮತ್ತು ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ ಹಾಗೂ ಯುವ ಸಾಹಿತಿ‌ ಮಂಗಲ ಟಿ. ಸತೀಶ್ ಜವರೇಗೌಡ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಂಸ್ಕೃತಿಕ ಪ್ರಶಸ್ತಿ’ಗೂ ಆಯ್ಕೆ ಮಾಡಲಾಗಿದೆ.

ಅ. ೨೭ ರಂದು ಸಂಜೆ ೪ ಗಂಟೆಗೆ ಮೈಸೂರು ನಗರದ ಪಾರಂಪರಿಕ ಸಭಾ ಭವನ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ೧೪೧ನೇ ಜಯಂತಿ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಮೂರು ಮಂದಿ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!