Thursday, October 24, 2024

ಪ್ರಾಯೋಗಿಕ ಆವೃತ್ತಿ

ಉಪಚುನಾವಣೆ| ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ ‘ಕೈ’ ಅಭ್ಯರ್ಥಿ

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ 2 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.

ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ಈ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಹಾಗೂ ಚನ್ನಪಟ್ಟಣಕ್ಕೆ  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಸಿ ಪಿ ಯೋಗೇಶ್ವ‌ರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಶಿಗ್ಗಾಂವಿ  ಕ್ಷೇತ್ರ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿದ್ದು, ಸದ್ಯದಲ್ಲೇ ಅಂತಿಮ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ಮತ್ತು ಈತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು ಈ ಮೂವರು ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನ.23ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅಕ್ಟೋಬರ್ 30 ಎಂದು ಆಯೋಗ ತಿಳಿಸಿದೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!