Thursday, October 24, 2024

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣದಲ್ಲಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ| ಅಭಿವೃದ್ದಿಗೆ ಮರು ಚಾಲನೆ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಉಪಚುನಾವಣೆ ಎದುರಿಸುತ್ತಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೊಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು. ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾ‌ರ್ ಹಾಗೂ ಡಿ ಕೆ ಸುರೇಶ್ ಅವರು ಸಾಥ್ ನೀಡಿದರು.

ಇದನಕ್ಕೂ ಮುನ್ನ ಬೃಹತ್ ಮೆರವಣಿಗೆ ನಡೆಸಿ ಚನ್ನಪಟ್ಟಣ ತಹಶೀಲ್ದಾರ್ ಕಚೇರಿಗೆ ಅವರನ್ನು ಕರೆ ತರಲಾಯಿತು.

50 ಸಾವಿರ ಮತಗಳ ಅಂತರದ ಗೆಲುವು

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವ‌ರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಯೋಗೀಶ್ವರ್ ಪರ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವ‌ರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡುತ್ತೇವೆ’ ಎಂದು ತಿಳಿಸಿದರು.

“ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾನ್ನಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವ‌ರ್ ಅವರೇ ಭರ್ಜರಿ ಜಯಗಳಿಸೋದು ಖಚಿತ” ಎಂದು ಭರವಸೆ ವ್ಯಕ್ತಪಡಿಸಿದರು.

ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

“ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ಧಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ” ಎಂದು ಸವಾಲು ಹಾಕಿದರು.

“ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!