Saturday, October 26, 2024

ಪ್ರಾಯೋಗಿಕ ಆವೃತ್ತಿ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಕ್ಟೋಬರ್​ 24 ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿತ್ತು. ಇಂದು (ಅ.26) 82ನೇ ಸಿಸಿಹೆಚ್‌ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

ಶಾಸಕ ಸ್ಥಾನದಿಂದ ಅನರ್ಹ

ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ, ಸಂಸದ ಸ್ಥಾನ ರದ್ದಾಗಲಿದೆ. ಇದೀಗ ಸೈಲ್​ಗೆ 7 ವರ್ಷ ಜೈಲು ಶಿಕ್ಷೆಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!