Monday, October 28, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾ.ಪಂ. ಆಯ್ಕೆಯಲ್ಲಿ ಅನ್ಯಾಯ; ಆರೋಪ

ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಕೊಡಮಾಡುವ 2023-24ನೇ ಸಾಲಿನ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆಯಲ್ಲಿ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಅನ್ಯಾಯವಾಗಿದೆ ಎಂದು ಗ್ರಾ.ಪಂ ಸದಸ್ಯ, ವಕೀಲ ಮಧುಸೂದನ್ ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪುರಸ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 134 ಪ್ರಶ್ನಾವಳಿಗಳ ಮೂಲಕ ಗ್ರಾ.ಪಂ.ಗಳಿಗೆ ಅಂಕಗಳನ್ನು ನೀಡಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಈ ಅಂತಿಮ ಪಟ್ಟಿಯಲ್ಲಿ ಹೆಮ್ಮನಹಳ್ಳಿ, ಭಾರತೀನಗರ, ಮತ್ತು ಕದಲೂರು ಗ್ರಾ.ಪಂಗಳ ಹೆಸರುಗಳಿದ್ದು, ನಮಗಿಂತ ಕಡಿಮೆ ಅಂಕ ಪಡೆದ ಭಾರತೀನಗರ ಗ್ರಾ.ಪಂ ಆಯ್ಕೆ ಮಾಡಲಾಗಿದೆ ಎಂದು ದೂರಿದರು.

ಈ ಆಯ್ಕೆಯ ವಿರುದ್ಧ ಜಿ.ಪಂ ಸಿಇಓ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, ಜಿ.ಪಂ ಸಿಇಓ ಅವರು ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಓಗಳ ಜೊತೆ ಜಿ.ಪಂ ನಲ್ಲಿ ಸಭೆ ನಡೆಸಿದ್ದು, ಹೆಮ್ಮನಹಳ್ಳಿ, ಭಾರತೀನಗರ ಗ್ರಾ.ಪಂಗಳ ಅಂಕಗಳನ್ನು ಪರಿಶೀಲನೆ ನಡೆಸಲಾಗಿ,  ಹೆಮ್ಮನಹಳ್ಳಿ ಗ್ರಾ.ಪಂಗೆ 21 ಹೆಚ್ಚು ಅಂಕಗಳು ಲಭಿಸಿರುವುದು ದೃಢಪಟ್ಟಿದೆ ಎಂದರು.

ಭಾರತೀನಗರ ಗ್ರಾ.ಪಂಗೆ ಅಂಕ ದೊರೆಯದ ಹಲವು ಭಾಗಗಳಿಗೆ 2 ದಿನಗಳಲ್ಲಿ ಕೃತಕ ದಾಖಲಾತಿ ಸೃಷ್ಠಿಸಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು, ಇದು ಮೇಲಧಿಕಾರಿಗಳ ಮಟ್ಟದಲ್ಲಿ ನಡೆದಿರುವ ವಂಚನೆಯು ಅಕ್ರಮವಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಅಧಿಕಾರಿ ಮಟ್ಟದಲ್ಲಿ ಅನ್ಯಾಯವಾಗಿದ್ದು, ಈ ಸಂಬಂಧ ಅಧಿಕಾರಿಗಳು ನ್ಯಾಯ ದೊರಕಿಸಿಕೊಡದೇ ಹೋದಲ್ಲಿ ನ್ಯಾಯಾಲಯದ ಮಟ್ಟಿಲು ಏರುವುದಾಗಿ ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಗೋಷ್ಠಿಯಲ್ಲಿ ಹೆಮ್ಮನಹಳ್ಳಿ ಗ್ರಾ.ಪಂ ಅಧ್ಯಕ್ಷೆ ವೀಣಾ, ಸದಸ್ಯ್ಯ ಕಮಲಾಕ್ಷಿ, ಹೆಚ್.ಸಿ.ಉಮೇಶ್, ನಾಗೇಶ್, ಹೆಚ್.ಕೆ.ನಂದೀಶ್‌ಗೌಡ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!