Monday, October 28, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ದೌರ್ಜನ್ಯ ನಡೆದರೆ, ದೂರು ನೀಡಲು ಹಿಂಜರಿಕೆ ಬೇಡ ; ಲತಾ

ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬಹುದಾದ ಮಾರ್ಗಗಳ ಬಗ್ಗೆ ಯೋಚಿಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್. ಲತಾ ತಿಳಿಸಿದರು.

ಮಂಡ್ಯ ಪಿ ಇ ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ನವದೆಹಲಿ ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೆಲವು ಮಹಿಳೆಯರು ತಾವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಅವರ ಮೇಲಾಗುವ ದೌರ್ಜನ್ಯದ ವಿರುದ್ದ ಹೊರಡಲು ಹಿಂದೆ ಉಳಿಯುತ್ತಾರೆ. ಜೊತೆಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇರುತ್ತದೆ. ಇಂದು ಆಯೋಜಿಸಲಾಗಿರುವ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರದ ಮಹತ್ವವನ್ನು ಎಲ್ಲರೂ ತಿಳಿದು ತಮ್ಮ ಮೇಲಾಗುವ ಕಿರುಕುಳದಿಂದ ರಕ್ಷಣೆ ಪಡೆಯುವ ಕಾಯ್ದೆಗಳನ್ನು ತಿಳಿದುಕೊಳ್ಳಿ ಎಂದರು.

ಮೂಲಭೂತ ಸೌಲಭ್ಯದ ಜೊತೆಗೆ ಗೌರವವನ್ನು ಸಹ ನೀಡಬೇಕು

ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯವನ್ನು ಕೊಡುವುದರ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ನಮ್ಮ ತಾಯಿ, ಸಹೋದರಿಯಂತೆ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ತಡೆಗಟ್ಟುವ ಸಲುವಾಗಿ ಕಾನೂನಿನ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ರೂಪಿಸಲಾಗಿದೆ. ಕಾಯ್ದೆಗಿಂತ ಮುಖ್ಯವಾದದ್ದು ನಮ್ಮಲ್ಲಿರುವ ಸಂಸ್ಕಾರವಾಗಿದ್ದು, ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ಕಾಣಬೇಕು. ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದು, ತಾಯಿಯಂತೆ ಕಾಣುತ್ತೇವೆ. ಒಬ್ಬ ಮಹಿಳೆಯು ಮಗಳಾಗಿ, ಅಕ್ಕಳಾಗಿ, ಹೆಂಡತಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ನಾವು ಪಡೆಯಬೇಕಾದರೆ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿಯನ್ನು ಸಾಧಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು.

ಕಾರ್ಯಾಗಾರದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎಂ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಿಷಿ ಮದನ್, ಡಾ ಕ್ರಿಷಿನಾ ಕಾಂತಾರಾಜು, ಡಾ ಸ್ವಪ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!