Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ; ವಿದ್ಯುತ್ ಕಂಬ ಸ್ಥಳಾಂತರಕ್ಕೆ ಶಾಸಕರ ಸೂಚನೆ

ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೯ರಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮತ್ತು ಶಾಸಕ ಪಿಎಂ ನರೇಂದ್ರಸ್ವಾಮಿ ಭೇಟಿ ನೀಡಿ ಒಳಚರಂಡಿ, ಕುಡಿಯುವ ನೀರು, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ ಕಾಮಗಾರಿಯನ್ನು ಮಾಡಬೇಕೆಂದು ಸೂಚನೆ ನೀಡಿದರು.

ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯ ಕಾಮಗಾರಿ ವೀಕ್ಷಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಶಾಸಕರು, ರಸ್ತೆ ಬದಿಯಲ್ಲಿ ನಿರ್ಮಿಸುತ್ತಿರುವ ಚರಂಡಿಯ ಅಡ್ಡಲಾಗಿ ಒಳಚರಂಡಿ ಮ್ಯಾನ್ ವೋಲ್, ಕುಡಿಯುವ ಪೈಪ್ ಹಾಗೂ ವಿದ್ಯುತ್ ಕಂಬಗಳು ಬಂದಿದ್ದರೂ ಕೂಡ ಅವುಗಳನ್ನು ತೆರವುಗೊಳಿಸಬೇಕು. ಚರಂಡಿ ಅಡ್ಡಲಾಗಿ ಮ್ಯಾನ್‌ವೋಲ್ ಬಂದಿದ್ದು, ಮಳೆ ನೀರು ಹೊರಕ್ಕೆ ಹೇಗೆ ಹೋಗುತ್ತದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮ್ಯಾನ್‌ವೋಲ್, ಕುಡಿಯುವ ನೀರು ಹಾಗೂ ವಿದ್ಯುತ್ ಕಂಬಗಳನ್ನು ಸ್ಥಳಾಂತರವಾಗುವವರೆಗೂ ಕಾಮಗಾರಿಯನ್ನು ಮುಂದುವರಿಸಬಾರದು ಎಂದು ತಿಳಿಸಿದರು.

ಪಟ್ಟಣದಲ್ಲಿ ಅಮೃತ ಯೋಜನೆಯಲ್ಲಿ ಕುಡಿಯುವ ನೀರಿಗೆ 71 ಕೋಟಿ ಅನುದಾನ ತಂದಿದ್ದು ಆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕರ್ನಾಟಕ ಒಳಚರಂಡಿ ಮತ್ತು ಕುಡಿಯುವ ನೀರು ಇಲಾಖೆಯ ಅಧಿಕಾರಿಗೆ ಆ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಮಾಡಿ ಸರಿಪಡಿಸಬೇಕು ಇಲ್ಲದಿದ್ದರೆ ಗುತ್ತಿದೆಗಾರರನ್ನು ಕಪ್ಪು ಪಟ್ಟಿಯಲ್ಲಿ ಸೇರಿಸಬೇಕೆಂದು ಎಚ್ಚರಿಕೆ ನೀಡಿದರು.

ಇದೇ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮತ್ತು ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ, ಲೋಕೋಪಯೋಗಿ ಇಲಾಖೆಯ ಎ ಇ ಸೋಮಶೇಖರ್ ಸೇರಿದಂತೆ ಅಧಿಕಾರಿಗಳು ಇದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ