Monday, November 23, 2026

ಪ್ರಾಯೋಗಿಕ ಆವೃತ್ತಿ

ಸರ್ದಾರ್ ವಲ್ಲಭಭಾಯಿ ಪಟೇಲ್ ಆದರ್ಶ ಅಳವಡಿಸಿಕೊಳ್ಳಬೇಕು : ಡಾ.ಕುಮಾರ

ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಅಖಂಡ ಭಾರತದ ಪರಿಕಲ್ಪನೆಯನ್ನು ನಾವೆಲ್ಲರೂ ಹೊಂದಿ ಅವರ ಆದರ್ಶಗಳನ್ನ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಹಾಗೂ ನಮ್ಮ ದೇಶಕ್ಕೆ ಏಕತೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಮಕ್ಕಳ ಮೂಲಕ ಸಾರಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ರಾಷ್ಟೀಯ ಏಕತಾ ದಿವಸದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಕ್ಟೋಬರ್ 31 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನೋತ್ಸವದ ಅಂಗವಾಗಿ 2014 ರಿಂದ ಕೇಂದ್ರ ಸರ್ಕಾರವು ಸದರಿ ದಿನವನ್ನು ರಾಷ್ಟ್ರೀಯ ಏಕತಾ ದಿವಸವೆಂದು ಘೋಷಣೆ ಮಾಡಲಾಗಿದೆ. ಆದ್ದರಿಂದ ಪ್ರತಿ ವರ್ಷವು ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜಯಂತಿ ಹಾಗೂ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಿದ್ದೇವೆ ಎಂದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿದ್ದಂತಹ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದಿದ್ದರೂ ಕೂಡ ವಿವಿಧ ಭಾಷೆಗಳ ಆಧಾರದಲ್ಲಿ ಹರಿದು ಹಂಚಿ ಹೋಗಿದ್ದಂತಹ ಪ್ರಾಂತ್ಯಗಳನ್ನು ಒಗ್ಗೂಡಿಸಿ, ಏಕೀಕೃತ ಭಾರತ ಹಾಗೂ ಅಖಂಡ ಭಾರತವನ್ನಾಗಿ ಮಾಡಬೇಕೆಂದು ಬಹಳ ಶ್ರಮವಹಿಸಿದವರು. ಏಕತೆ ಮಂತ್ರವನ್ನು ಸಾರಿ ಭಾಷಾ ಪ್ರಾಂತ್ಯವನ್ನು ಒಂದುಗೂಡಿಸುವ ಕನಸನ್ನು ಕಂಡಂತಹ ಮಹಾನ್ ಮಾನವತಾವಾದಿ ಸರ್ದಾರ್ ವಲ್ಲಭಬಾಯಿ ಪಟೇಲ್ ರವರನ್ನು ನಾವೆಲ್ಲರೂ ಇಂದು ಸ್ಮರಿಸಬೇಕು ಎಂದರು.

ಪ್ರತಿಜ್ಞಾ ವಿಧಿ ಬೋಧನೆ

ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ಅರ್ಪಿಸಿಕೊಳ್ಳುತ್ತೇನೆ ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಬಾಯ್ ಪಟೇಲ್‌ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂದು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಉಪ ವಿಭಾಗಾಧಿಕಾರಿ ಶಿವಮೂರ್ತಿ,
ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ಸಾಂಸ್ಕೃತಿಕ ರಾಯಭಾರಿ ಪ್ರೊ. ಬಿ ಜಯಪ್ರಕಾಶ ಗೌಡ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಪ್ರವಾಸೋದ್ಯಮ ಇಲಾಖೆಯ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಬಿ ವಿ ನಂದೀಶ್, ತಹಶಿಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ