Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ನ.1ರ ಶುಕ್ರವಾರ ಹಾಗೂ ನ.2ರ ಶನಿವಾರದದಂದು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ ? 

ಬೆಂಗಳೂರು ಗ್ರಾಮಾಂತರ,ರಾಮನಗರ, ಬಾಗಲಕೋಟೆ, ಬಿಜಾಪುರ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ಮಳೆ ಹಾಗೂ ಗುಡುಗು ಸಹಿತ ಮಿಂಚಿನ ಸಾಧ್ಯತೆ ಇದೆ  ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಚಂಡಮಾರುತದ ಪ್ರಭಾವದಿಂದ ಮಳೆಯಾಗಲಿದೆ.

ಇಂದಿನಿಂದ ಮೂರು ದಿನ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನ.1ರಿಂದ ನ.3 ರವರೆಗೆ ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗದಲ್ಲಿವ್ಯಾಪಕ ಮಳೆಯಾಗಲಿದ್ದು, ಯೆಲ್ಲೊಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ