ಕಳೆದ 30 ವರ್ಷಗಳಿಂದಲೂ ಸಾಹಿತ್ಯ, ಸಾಮಾಜಿಕ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಂಡ್ಯದ ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಅವರಿಗೆ ಕರ್ನಾಟಕ ಸರ್ಕಾರವು ಸುವರ್ಣ ಕರ್ನಾಟಕ ಪ್ರಶಸ್ತಿ ಯನ್ನು ನವೆಂಬರ್ 1 ರಂದು ಬೆಂಗಳೂರಿನಲ್ಲಿ ವಿಧಾನಸೌಧ ಮುಂಭಾಗ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿರುವ
ಪ್ರಸ್ತುತ ಡಾ.ಮೀರಾ ಶಿವಲಿಂಗಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಕಸಾಪ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಮೈಸೂರು ಮುಕ್ತ ವಿವಿಯಿಂದ ಗೌರವ ಡಾಕ್ಟರೇಟ್ ಕೂಡ ಪಡೆದಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಸಣ್ಣ ಕೈಗಾರಿಕೋದ್ಯಮ ಪ್ರಶಸ್ತಿ, ಸಾವಿತ್ರಮ್ಮ ದೇಜಗೌ ಪ್ರಶಸ್ತಿ, ಒಕ್ಕಲಿಗ ಉದ್ಯಮ ಪ್ರಶಸ್ತಿ, ವಾಣಿಜ್ಯ ಮಂಡಳಿಯಿಂದ ಮಹಿಳಾ ಕೈಗಾರಿಕೋದ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಪಡೆದಿರುವ ಇವರು, ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಸೇವೆಗಾಗಿ ರಾಜ್ಯಪಾಲರಿಂದಲೂ ಅತ್ಯುತ್ತಮ ಸೇವಾ ಪ್ರಶಸ್ತಿ ದಕ್ಕಿಸಿಕೊಂಡಿದ್ದಾರೆ.
ಪ್ರಥಮವಾಗಿ ಮಂಡ್ಯ ಜಿಲ್ಲೆಗೆ ಕಂಪ್ಯೂಟರ್ ಪರಿಚಯಿಸಿದ ಕೀರ್ತಿಯು ಇವರಿಗೆ ಸಲ್ಲುತ್ತದೆ. ಜೊತೆಗೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಮಹಿಳೆಯರಿಗೆ ಸ್ವ–ಉದ್ಯೋಗ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. ಅಂಗವಿಕಲರಿಗೆ ಸಲಕರಣೆಗಳ ವಿತರಣೆ ಸೇರಿದಂತೆ ಹಲವು ಯೋಜನೆಗಳನ್ನು ಉಚಿತವಾಗಿ ನೀಡುವ ಮೂಲಕ ಜನಮನ್ನಣೆಗಳಿಸಿದ್ದಾರೆ.




