Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನ.8ರಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪೋತ್ಸವ

ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಸುವರ್ಣ ನ್ಯೂಸ್, ಕನ್ನಡಪ್ರಭ ದಿನ ಪತ್ರಿಕೆಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ಕಾವೇರಿ ಉತ್ಸವ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಂಡ್ಯ ಸಂಭ್ರಮವನ್ನಾಗಿ ನವೆಂಬರ್ 8, 9 ಹಾಗೂ 10ರಂದು ನಗರ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಎಲ್ಲಾ ವಯಸ್ಸಿನವರಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಅಡುಗೆ ಮಹಾರಾಣಿ, ನೃತ್ಯ, ಗಾಯನ, ವೇಷಭೂಷಣ, ಬೆಂಕಿ ರಹಿತ ಅಡುಗೆ, ಬೊಂಬಾಟ್ ಜೋಡಿ, ಕಿಡ್ಸ್ ಫ್ಯಾಶನ್ ಶೋ, ಚಿತ್ರಕಲಾ ಸ್ಪರ್ಧೆ, ಫ್ಯಾಮಿಲಿ ಫ್ಯಾಷನ್ ಶೋ, ಮದ್ದುಮಗು ಸ್ಪರ್ಧೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ 9964865888 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮವನ್ನು ಮೈಸೂರು- ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು, ಮುಖ್ಯ ಅತಿಥಿಗಳಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಿವೃತ್ತ ಲೋಕಾಯುಕ್ತ, ನಿವೃತ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ, ಶಾಸಕರಾದ ಎಚ್.ಡಿ.ರೇವಣ್ಣ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ಉದಯ್, ಎಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರುಗಳಾದ ಎಚ್.ವಿಶ್ವನಾಥ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಸಂಸದೆ ಸುಮಲತ, ಹಿರಿಯ ಅಧಿಕಾರಿ ಜಯರಾಮ್ ರಾಯಪುರ, ಹಿರಿಯ ಪೊಲೀಸ್ ಅಧಿಕಾರಿ ರವಿಕಾಂತ್‌ಗೌಡ ಉಪಸ್ಥಿತರಿರುವರು ಎಂದು ವಿವರಿಸಿದರು.

ಕಾರ್ಯಕ್ರಮಗಳ ದಿನಗಳಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6ರಿಂದ 10ರವರೆಗೆ ವಿವಿಧ ಚಲನಚಿತ್ರ ನಟರು, ಕಲಾವಿದರ ಸಮ್ಮುಖದಲ್ಲಿ ಹಾಡು, ನೃತ್ಯ, ಹಾಸ್ಯ ಕಾರ್ಯಕ್ರಮಗಳು ಕಿರುತೆರೆಯ ಕಲಾವಿಧರಿಂದ ನಡೆಯಲಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಪ್ರಧಾನ ಪೋಷಕರಾದ ಎಚ್.ಎನ್.ಯೋಗೇಶ್, ವಿನಯ್ ರಾಮಕೃಷ್ಣ, ಟ್ರಸ್ಟ್‌ ಉಪಾಧ್ಯಕ್ಷ ಜಗದೀಶ್, ಸಾಂಸ್ಕೃತಿಕ ಕಾರ್ಯದರ್ಶಿ ಟಿ.ಡಿ.ನಾಗರಾಜ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ