ಮಂಡ್ಯದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ನ.13ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.
ಚಿಕ್ಕ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶಗಳಾದ ಶಂಕರಪುರ, ಜೈನ್ ಸ್ಟ್ರೀಟ್, ಬೀಡಿ ಕಾಲೊನಿ, ಜಬ್ಬಾರ್ ಸರ್ಕಲ್, ವಿವೇಕಾನಂದ ಬಡಾವಣೆ, ಗೋಪಾಲಪುರ, ಚಿಕ್ಕಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ. ಗೌಡಗೆರೆ, ಎಚ್. ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್. ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ ವಿದ್ಯುತ್ ವ್ಯತ್ಯಯ ಆಗಲಿದೆ.




