Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗ್ರಾ.ಪಂ. ಸದಸ್ಯ ಲೋಕಾಯುಕ್ತ ಬಲೆಗೆ

ಶೌಚಗೃಹ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾ.ಪಂ ಸದಸ್ಯ ಕೆ.ಆರ್.ಅನಿಲ್‌ಕುಮಾರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಕಾಮಗಾರಿ ಮಾಡಿದ ಬಿಲ್ ಹಣ ಬಿಡುಗಡೆ ಮಾಡಿಸಲು‌ 50 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಕೋಲಕಾರನದೊಡ್ಡಿಯ ಚನ್ನಬಸಪ್ಪ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಸೋಮವಾರ ರಾತ್ರಿ ನಗರದ ಲೋಕಾಯುಕ್ತ ಕಚೇರಿ ಸಮೀಪದ ಹೋಟೆಲ್‌ನಲ್ಲಿ ಲಂಚ ಸ್ವೀಕರಿಸುವ ವೇಳೆ ವಶಕ್ಕೆ ಪಡೆಯಲಾಗಿದೆ.

ಡಿವೈಎಸ್ಪಿ ಸುನಿಲ್‌ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಮೋಹನ್ ರೆಡ್ಡಿ, ಜಯರತ್ನಾ, ಸಿಬ್ಬಂದಿ ಮಹದೇವಸ್ವಾಮಿ, ಶಂಕರ್, ಶರತ್ ದಾಳಿ ನಡೆಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ