Saturday, November 21, 2026

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣ ಉಪ ಚುನಾವಣೆ | ಅಂದಾಜು ಶೇ.88.80ರಷ್ಟು ಮತದಾನ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನ. 13ರ ಬುಧವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಶಾಂತಿಯುತ ಮತದಾನ ನಡೆದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,866 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆದಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 1,00,501 ಪುರುಷ ಮತದಾರರು ಹಾಗೂ 1,06,362 ಮಹಿಳಾ ಮತದಾರರು ಮತ್ತು ಇತರೆ 3 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟು 2,06,866 ಮತಗಳು ಚಲಾವಣೆಯಾಗಿವೆ. ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಂದಾಜು ಶೇ. 88.80 ಮತದಾನವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ