ಮಕ್ಕಳು ದುಶ್ಚಟ ಗಳಿಂದ ದೂರ ಉಳಿದು ತಮ್ಮ ಶೈಕ್ಷಣಿಕ ಗುರಿ ಸಾಧನೆಯತ್ತ ಒತ್ತು ನೀಡಿದಾಗ ಮಾತ್ರ ಸಾಮಾಜಿಕ ಗೌರವ ಸಂಪಾದಿಸಲು ಸಾಧ್ಯ ಎಂದು ಇಲ್ಲಿನ ಜೆಎಂಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಸಚಿನ್ ಕುಮಾರ್ ಶಿವಪೂಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕೆ ಎನ್ ನಾಗೇಗೌಡ ಕಾನೂನು ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾ ಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ದುಶ್ಚಟಗಳ ದಾಸರಾಗಿ ಇದಕ್ಕಾಗಿ ಹಲವಾರು ಅಪರಾಧ ಕೃತ್ಯಗ ಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ದುರಾದೃಷ್ಟಕರ ಸಂಗತಿಯಾ ಗಿದ್ದು ಈ ಮಕ್ಕಳನ್ನು ಕಷ್ಟಪಟ್ಟು ಬೆಳೆಸಿದ ಮಕ್ಕಳಿಗೆ ದೊಡ್ಡ ಆಘಾತವಾಗುವುದರ ಜೊತೆಗೆ ಸಮಾಜಕ್ಕೂ ಕಂಟಕವಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಓದು ಪುಸ್ತಕವನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಡಿ ಎಂ ಸುಂದರ್, ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಸಂವಿಧಾನ ಓದು ಪುಸ್ತಕ ನೀಡಲಾಗಿದ್ದು ವಿದ್ಯಾರ್ಥಿಗಳು ನಮ್ಮ ಸಂವಿಧಾನ ಹಾಗೂ ಕಾನೂನು ಬಗ್ಗೆ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಕೆ ಎನ್ ನಾಗೇಗೌಡ ಕಾನೂನು ಕಾಲೇಜಿನ ಪ್ರಾಂಶುಪಾಲ ಹೆಚ್ ಎನ್ ಮಂಜು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಶಂಕರಸ್ವಾಮಿ, ಅಪರ ಸರ್ಕಾರಿ ವಕೀಲರಾದ ಶ್ರೀಕಂಠಸ್ವಾಮಿ, ವಕೀಲರಾದ ವೆಂಕಟೇಶ್, ಮುತ್ತುರಾಜ್, ನಟೇಶ್, ಶಾಂತಿ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಪುಟ್ಟರಾಜು, ಶಾಂತಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವೇದಮೂರ್ತಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಅನಿತಾ, ಮತ್ತಿತರರು ಪಾಲ್ಗೊಂಡಿದ್ದರು.




