Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನ.19ರಂದು ರೇಣುಕಾಚಾರ್ಯ – ಬಸವೇಶ್ವರರ ಜಯಂತ್ಯೋತ್ಸವ

ಬಸವ ಸಮಿತಿ, ಜಗದ್ಗುರು ರೇಣುಕಾಚಾರ್ಯರ ಸೇವಾ ಸಮಿತಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಮಂಡ್ಯ ಜಿಲ್ಲಾ ವೀರಶೈವ ಲಿಂಗಾಯಿತ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರದಯಲ್ಲಿ ಜಗದ್ಗುರು ರೇಣುಕಾಚಾರ್ಯ ಮತ್ತು ವಿಶ್ವಗುರು ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಮಂಡ್ಯ ಜಿಲ್ಲೆಯ ಎಲ್ಲಾ ಮಠಾಧಿಪತಿಗಳ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ನವೆಂಬರ್ ೧೯ರ ಬೆಳಿಗ್ಗೆ ೧೦ ಗಂಟೆಗೆ ಮಂಡ್ಯನಗರದ ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ವೀರಶೈವ ವಿದ್ಯಾರ್ಥಿ ನಿಲಯ (ಗಿರಿಜಾ ಥಿಯೇಟರ್ ಪಕ್ಕ)ದಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕನಕಪುರ ದೇಗುಲ ಮಠದ ಡಾ.ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು, ಕನಕಪುರ ಮರಳೆ ಗವಿಮಠದ ಡಾ.ಮುಮ್ಮಡಿ ಶಿವರುದ್ರ ಮಹಾಸ್ವಾಮಿಗಳು, ಚಂದ್ರವನ(ಬೇಬಿ ಮಠ)ದ ಡಾ.ತ್ರಿನೇಂತ್ರ ಮಹಂತ ಶಿವಯೋಗಿ ಸ್ವಾಮಿಗಳು ವಹಿಸಲಿದ್ದು, ಕೆ.ಆರ್.ಪೇಟೆ ತೆಂಡೆಕೆರೆಯ ಬಾಳೆ ಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮಿಗಳು, ಮಳವಳ್ಳಿ ಧನಗೂರಿನ ವೀರ ಸಿಂಹಾಸನ ಸಂಸ್ಥಾನ ಮಠದ ಮುಮ್ಮಡಿ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯಸ್ವಾಮಿಗಳ ದಿವ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ವಿವಿಧ ಮಠಗಳ ಶ್ರೀಗಳು ಭಾಗವಹಿಸಲಿದ್ದಾರೆ ಎಂದರು ಹೇಳಿದರು.

ಮಂಡ್ಯ ಶಾಸಕ ಪಿ.ರವಿಕುಮಾರ್‌ಗೌಡ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮಂಡ್ಯ ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷ ಎಂ.ಬಿ.ರಾಜಶೇಖರ್ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ಮತ್ತು ಬಸವೇಶ್ವರರ ಜಯಂತೋತ್ಸವದ ಕುರಿತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಜಿಲ್ಲಾಧಿಕಾರಿಗಳಾದ ಡಾ.ಸಿ.ಸೋಮಶೇಖರ್, ಸಂಸ್ಕೃತ ವಿ.ವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ಶಿವಕುಮಾರ ಸ್ವಾಮಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ವಿಶ್ವ ವೀರಶೈವ ಲಿಂಗಾಯಿತ ಒಕ್ಕೂಟದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಎಸ್.ಡಿ.ಜಯರಾಮ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ ಆನಂದ್, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಉದ್ಯಮಿ ಎಂ.ಆರ್.ಉಮಾಪತಿ ಭಾಗವಹಿಸುವರು. ಇದೇ ವೇಳೆ ಸಹಕಾರ ಸಂಘಗಳ ಉಪ ನಿಬಂಧಕ(ಪ್ರಭಾರ) ಹೆಚ್.ಆರ್.ನಾಗಭೂಷಣ್ ಅವರನ್ನು ಅಭಿನಂದಿಸಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಮಂಜುನಾಥ್, ಮಂಡ್ಯ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಎಂ.ಎಸ್.ಶಿವಪ್ರಕಾಶ್, ಷಡಕ್ಷರಿ, ಗುರುಸ್ವಾಮಿ, ರಮೇಶ್, ಕುಳ್ಳಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ