Friday, November 20, 2026

ಪ್ರಾಯೋಗಿಕ ಆವೃತ್ತಿ

ನಾನು ಆದಿಚುಂಚನಗಿರಿಯಲ್ಲಿ ಬೆಳೆದ ಮಠದ ಹುಡುಗ ; ಜಮೀರ್ ಅಹಮದ್

ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ. ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು, ಮುಸ್ಲಿಂ ಓಟ್ ಬೇಡ ಅಂತಾ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ? ಇದು ಎಷ್ಟು ಸರಿ ಅಂತ ಕೇಳಿದ್ದು ಎಂದು ಹೇಳಿದರು.

ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರಿಗೆ ಯಾವ ಹೇಳಿಕೆಯೂ ನೀಡಿಲ್ಲ. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು ಎಂದ ಅವರು, ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್‌ ಮಾಡುವರು ಅಂತಾ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ? ನಿನ್ನೆ ಕುಮಾರಸ್ವಾಮಿ ಅದೇ ಮಾತು ಹೇಳಿದ್ದಾರೆ, ಹೌದು ಸ್ವಾಮಿ ನಾವು ಬಡವರು ಅವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ‌ನಂದು, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಹೇಳಿದರು.

ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿರುವ ವಿಚಾರದ ಬಗ್ಗೆಯೂ ಮಾತನಾಡಿದ ಸಚಿವರು, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ರೂಟೀನ್. ಇಡಿಯವರು ಎಸಿಬಿಗೆ ಪಾವರ್ಡ್ ಮಾಡಿದ್ದಾರೆ. ಕೇಸ್ ಅಲ್ಲಿಂದ ಲೋಕಾಯುಕ್ತ‌ಗೆ ಬಂದಿದೆ. ನೋಟಿಸ್ ಬಂದ ಮೇಲೆ ಹೋಗಲೇ ಬೇಕು ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ