Friday, November 20, 2026

ಪ್ರಾಯೋಗಿಕ ಆವೃತ್ತಿ

ವಿಶೇಷಚೇತನರು ಸಮಾಜಕ್ಕೆ ಹೊರೆ ಅಲ್ಲ, ಇತರರಂತೆ ಬದುಕಲು ಅರ್ಹರು ; ನರೇಂದ್ರಸ್ವಾಮಿ

ವಿಶೇಷಚೇತನರು ಸಮಾಜಕ್ಕೆ ಹೊರೆ ಅಲ್ಲ. ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ವಿಶೇಷ ಚೇತನರಿಗೆ 13 ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೆತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಯುವಸಬಲೀಕರಣದ ವತಿಯಿಂದ ದ್ವಿಚಕ್ರ ವಾಹನ ಗಳನ್ನು ವಿತರಿಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನು ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಕೊಡಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇ.ಓ ಶ್ರೀನಿವಾಸ್. ಪುರಸಭೆ ಸದಸ್ಯರಾದ ಶಿವ ಸ್ವಾಮಿ, ಸಂತೋಷ್, ಬಸವರಾಜು, ಮುಖಂಡ ದೇವರಾಜು, ವಿಕಲಚೇತನ ಇಲಾಖೆ ಅಧಿಕಾರಿ ಮಹದೇವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ