Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೂಲವ್ಯಾಧಿ ಕುರಿತು ಅರಿವು ಮೂಡಿಸಲು ‘ಬೃಹತ್ ವಾಕತಾನ್’ ; ಡಾ.ಮಾದೇಶ್

ಮಂಡ್ಯದ ಎಸ್.ಡಿ.ಜಯರಾಮ್ ಆಸ್ಪತ್ರೆ, ಸ್ಮೈಲ್ ಗ್ಯಾಸ್ಟ್ರೋ ಎಂಟೆರಾಲಜಿ, ಎಸ್.ಡಿ.ಜಯರಾಮ್ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಹಾಗೂ ಮಂಡ್ಯ ನಗರದ ಹಲವು ನಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಂದ ಮೂಲವ್ಯಾಧಿ ಸಮಸ್ಯೆ ಸಂಬಂಧ ಬೃಹತ್ ವಾಕತಾನ್ ಕಾರ್ಯಕ್ರಮವನ್ನು ನವೆಂಬರ್ 20ರಂದು ಹಮ್ಮಿಕೊಳ್ಳಲಾದೆ ಎಂದು ಎಸ್.ಡಿ.ಜಯರಾಮ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಾದೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲವ್ಯಾದಿ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಬೃಹತ್ ವಾಕತಾನ್ ಕಾರ್ಯಕ್ರಮವನ್ನು ಬೆಳಿಗ್ಗೆ ನಗರದ ಜಿಲ್ಲಾಧಿಕಾರಿ ಕಛೇರಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ವರೆಗೆ ನಡೆಸಲಾಗುವುದು ಎಂದರು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಉದ್ಘಾಟಿಸಲಿದ್ದು, ಈ ಮೂಲಕ ಮೂಲವಯಾಧಿ ಖಾಯಿಲೆಗಳಿಗೆ ಸಂಬಂಧಿಸಿದ ಹಾಗೂ ಶೌಚಾಲಯಗಳನ್ನು ಉಪಯೋಗಿಸುವ ಕುರಿತು ಜನಾಂದೋಲನ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಮೂಲವ್ಯಾದಿ ಕುರಿತ ಘೋಷವಾಕ್ಯಗಳ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಹೇಳಿದರು.

ಆಸ್ಪತ್ರೆಯ ವೈದ್ಯರಾಗಿದ್ದ ಡಾ.ಸಿ.ಎಂ.ಪರಮೇಶ್ವರ್ ಅವರು, ಹಲವು ಸುದ್ದಿಗೋಷ್ಠಿ ನಡೆಸಿ ಮಾಡಿದ ಹೋರಾಟದ ಫಲವಾಗಿ ನಕಲಿ ವೈದ್ಯರನ್ನು ಗುರುತಿಸಲು ಸರ್ಕಾರ ಮುಂದಾಗಿದ್ದು, ಸರ್ಕಾರದಿಂದ ನೀಡಲಾಗಿರುವ ಕೆ.ಪಿ.ಎಂ.ಈ ನೋಂದಣಿ ಫಲಕವನ್ನು ಅಳವಡಿಸುವಂತೆ ಆದೇಶ ಹೊರಡಿಸಿದೆ ಎಂದು ಇದೇ ವೇಳೆ ತಿಳಿಸಿದರು.

ಗೋಷ್ಠಿಯಲ್ಲಿ ಸತ್ಯನಾರಾಯಣ್, ಅಕ್ಷಯ್, ಗಿರೀಶ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ