Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ನಾಮ ನಿರ್ದೇಶಿತ ಪುರಸಭಾ ಸದಸ್ಯರಿಂದ ಶಾಸಕರಿಗೆ ಅಭಿನಂದನೆ

ಮಳವಳ್ಳಿ ಪುರಸಭೆಯ ನಾಮ ನಿರ್ದೇಶಿತ ಸದಸ್ಯರು ಇಂದು ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರನ್ನು ಅಭಿನಂದಿಸಿದರು.

ಮಳವಳ್ಳಿ ತಾಲ್ಲೂಕಿನ ಪೂರಿಗಾಲಿಯ ನಿವಾಸಕ್ಕೆ ತೆರಳಿದ ನಿರ್ದೇಶಿತ ಸದಸ್ಯರಾದ ಬಸವರಾಜು, ಅಯೂಬ್ ಪಾಷಾ, ಆನಂದ್, ಸಂತೋಷ, ಬಸವರಾಜು ಅವರು ಶಾಸಕರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಬಸವರಾಜು ಮಾತನಾಡಿ, ನಮ್ಮ ಪಕ್ಷದ ನಿಷ್ಠೆಗೆ ಒತ್ತು ನೀಡಿ ಶಾಸಕರು,  ನಮ್ಮನ್ನು ಆಯ್ಕೆ ಮಾಡಿರೋದು ಸಂತಸದ ವಿಷಯವಾಗಿದೆ. ಅದರಂತೆ ಪಟ್ಟಣದ ಕುಡಿಯುವ ನೀರು, ಸ್ವಚ್ಛತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಳವಳ್ಳಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅವರನ್ನು ಎಂ ನರೇಂದ್ರ ಸ್ವಾಮಿಯವರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ