Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ; ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆರವರ 46ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮಂಡ್ಯ ಜಿಲ್ಲಾ ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗದ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಿಸ್ಮರಣೀಯವಾದ ಸೇವೆ ಸಲ್ಲಿಸಿರುವ ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನ.22ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ನಗರದ ಕರ್ನಾಟಕ ಸಂಘದ ಕೆವಿಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಈ ಕಾರ್ಯಕ್ರಮವನ್ನು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಶಾಸಕ ರವಿಕುಮಾರ್ ಭಾಗವಹಿಸುವರು. ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ ಡಿ ಗಂಗಾಧರ್ ಅಧ್ಯಕ್ಷತೆ ವಹಿಸುವರು.

ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ
ಡಾ. ಕುಮಾರ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ಆಸೀಫ್ ಅಹ್ಮದ್ ನೆರವೇರಿಸುವರು. ಅಲ್ಲದೇ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ನರಸಿಂಹ ಸ್ವಾಮಿ, ಸರ್ಕಾರಿ ಮಹಿಳಾ ಕಾಲೇಜಿನ ಆಂಗ್ಲ ಪ್ರಾಧ್ಯಾಪಕ ಪ್ರಸನ್ನ ಕುಮಾರ್ ಕೆರಗೋಡು, ನಿವೃತ್ತ ಪ್ರಾಧ್ಯಾಪಕ
ಪಿ ಡಿ ತಿಮ್ಮಪ್ಪ, ಪತ್ರಕರ್ತ ಡಿ ಶಶಿಕುಮಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಉಷಾರಾಣಿ, ಪ್ರೌಢಶಾಲಾ ಶಿಕ್ಷಕರಾದ ಡಾ.ಕೆ ಶಬಾನ ಹಾಗೂ ಮತ್ತು ಚಲನಚಿತ್ರ ಯುವ ನಿರ್ಮಾಪಕ
ಅಖಿಲೇಶ್ ಗೌಡಗೆರೆ ಅವರಿಗೆ ಬಸವಶ್ರೀ ಪುರಸ್ಕಾರ ನೀಡಿ ಅಭಿನಂದಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗದ ಅಧ್ಯಕ್ಷ ಸುಂಡಹಳ್ಳಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ