Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನವೆಂಬರ್ 22 ರಂದು ಶುಕ್ರವಾರ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 8.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 275 ಕ್ಕೆ ಹೊಂದಿಕೊಂಡಂತೆ ಇರುವ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಆಯೋಜಿಸಲಾಗಿರುವ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಎ.ಪಿ.ಎಂ.ಸಿ ಎಳನೀರು ಉಪ-ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ.

ಮದ್ಯಾಹ್ನ 12 ಗಂಟೆಗೆ ಕಿಕ್ಕೇರಿ ಸಹಕಾರ ಭವನದ ಆವರಣದಲ್ಲಿ ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಭವನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮದ್ಯಾಹ್ನ 2.45 ಗಂಟೆಗೆ ನಾಗಮಂಗಲ (ಮಿನಿ ವಿಧಾನಸೌಧ) ತಾಲೂಕು ಕಚೇರಿ ಆವರಣದಲ್ಲಿ ನಾಗಮಂಗಲದಲ್ಲಿ ಇತ್ತೀಚೆಗೆ ಬೆಂಕಿ ತಗುಲಿ ಸುಟ್ಟ ಅಂಗಡಿ ಮಳಿಗೆಗಳ ಮಾಲೀಕರುಗಳಿಗೆ ಪರಿಹಾರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.30 ಗಂಟೆಗೆ ಮಂಡ್ಯ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ