Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಾಹಿತ್ಯ ಸಮ್ಮೇಳನ ಯಶಸ್ವಿಗೆ ವಕೀಲರ ಸಹಕಾರ ಅಗತ್ಯ ; ರವಿಕುಮಾರ್

ಮಂಡ್ಯದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ 40 ಮಂದಿ ವಕೀಲರನ್ನು ವಿವಿಧ ಉಪ ಸಮಿತಿಗಳಿಗೆ ಸದಸ್ಯರನ್ನಾಗಿ ನೇಮಕ ಮಾಡಿ ಶಾಸಕ ಪಿ.ರವಿಕುಮಾರ್ ಅವರು ವಕೀಲರಿಗೆ ನೇಮಕಾತಿ ಪತ್ರ ನೀಡಿದರು.

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ವಕೀಲರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಸಮ್ಮೇಳನದ ಯಶಸ್ವಿಗೆ ವಕೀಲರ ಪಾತ್ರ ಇರಬೇಕು. ವಿವಿಧ ಸಮಿತಿಗಳಿಗೆ ನೇಮಿಸಿರುವ ವಕೀಲರುಗಳು ಸಮಿತಿಗಳಲ್ಲಿ ನಡೆಯುವ ಸಭೆಗಳಲ್ಲಿ ಭಾಗವಹಿಸಿ ಸಲಹೆಗಳನ್ನು ಕೊಡಬೇಕು ಎಂದು ತಿಳಿಸಿದರು.

ಈಗಾಗಲೇ ನಾನು ವಸತಿ ಸಮಿತಿಯ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದು ಹಲವಾರು ಸಭೆಗಳು ನಡೆದಿವೆ. ಮುಂದಿನ ಸಭೆಗಳಲ್ಲಿ ವಸತಿ ಸಮಿತಿಯ ಸದಸ್ಯರು ಭಾಗವಹಿಸಿ ಎಂದರು. ಮಂಡ್ಯ ನಗರದಲ್ಲಿ ಕೋರ್ಟ್ ಕಟ್ಟಡ ಕಟ್ಟಲು ಎರಡು ಜಾಗಗಳನ್ನು ಗುರುತಿಸಲಾಗಿದ್ದು ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

ವಕೀಲ ಟಿ.ಎಸ್.ಸತ್ಯಾನಂದ ಮಾತನಾಡಿ. 40 ಜನ ವಕೀಲರುಗಳಿಗೆ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಗಳಿಗೆ ಉಪ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸಲು ವಕೀಲರು ಭಾಗಿಯಾಗ ಬೇಕು ಎಂದು ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಸಮ್ಮೇಳನಾಧ್ಯಕ್ಷರ ಉಪಸಮತಿಗೆ ವಕೀಲ ಬಸವಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಕೀಲರಿಗೆ ಸಂದ ಗೌರವ ಎಂದು ತಿಳಿಸಿದರು.

ಹಿರಿಯ ವಕೀಲ ಬಸವಯ್ಯ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ನಮ್ಮ ಮನೆಯ ವ್ಯವಹಾರ ಎಂದು ತಿಳಿದು ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಎಲ್ಲರೂ ಒಮ್ಮತದಿಂದ ಮನಪೂರ್ವಕವಾಗಿ ಕೆಲಸ ಮಾಡಿದರೆ ಸಾಹಿತ್ಯ ಸಮ್ಮೇಳನಕ್ಕೆ ಯಶಸ್ಸು ಸಿಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಎಂ.ಜೆ.ಜೈನ್, ಅರುಣ್ ಕುಮಾರ್, ಉಮಾ,ಮಹೇಶ್, ಜಯಲಕ್ಷ್ಮಿ, ಕೆಂಪೇಗೌಡ, ಶಿವಕುಮಾರ್ ಭಾಸ್ಕರ್, ರೂಪ, ಪೂರ್ಣಿಮಾ, ಕೃಷ್ಣಮೂರ್ತಿ, ನಾಗರಾಜು ಸೇರಿದಂತೆ ವಿವಿಧ ವಕೀಲರು ಭಾಗವಹಿಸಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ