ವರದಿ ಶ್ರೀ ರಂಗನಾಥ್ ಮಾಕವಳ್ಳಿ
ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಯುಷ್ಯರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಿಗದಿಯಾದ ಚುನಾವಣೆ ವೇಳೆ ಯಾರು ಸ್ಪರ್ಧಿಸಿದೆ, ನಾಮಪತ್ರ ಸಲ್ಲಿಸದ ಕಾರಣ ಅವಿರೋದ ಆಯ್ಕೆಯನ್ನು ಚುನಾವಣೆ ಅಧಿಕಾರಿ ರಮ್ಯ ಪ್ರಕಟಿಸಿದರು
ಇದೇ ವೇಳೆ ನೂತನ ಅಧ್ಯಕ್ಷರಾಗಿ ಮಾತನಾಡಿದ ಅವರು, ಶಾಸಕ ದರ್ಶನ್ ಪುಟ್ಟಣ್ಣಯ್ಯರವರು ಈಗಾಗಲೇ ಹಲವು ಗ್ರಾಮಾಭಿವೃದ್ಧಿಯ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗ್ಗೆ ಎಲ್ಲಾ ಸದ್ಯಸರ ಜೊತೆಗೂಡಿ, ಅವರ ಮಾರ್ಗದರ್ಶನದಲ್ಲಿ ಕೇಂದ್ರ ಮತು ರಾಜ್ಯ ಸರ್ಕಾರದ ಅನುದಾನವನ್ನು ಸದ್ಭಳಕೆ ಮಾಡಿಕೊಂಡು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ವೇಗವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಶಾಂತಮ್ಮನವರ ಮಗ ಮಂಜುನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಚೌವಾಣ್, ಕೆ.ಪಿ.ಯೋಗರಾಜ್, ಕ್ಯಾತನಹಳ್ಳಿ ನಟರಾಜ್, ಗೌಡಪ್ಪ, ತುಳಸಿದಾಸ್, ರವಿಕುಮಾರ್, ನಯನ, ದಿನೇಶ್, ಮಲ್ಲಿಗೆರೆ ರಾಜು, ಪುನೀತ್ ಚೆಟ್ಟೆನಹಳ್ಳಿ ಮಂಜು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು




