Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆ; ಹಲವರಿಂದ ನಾಮಪತ್ರ ಸಲ್ಲಿಕೆ

ಡಿ.4 ರಂದು ನೆಡೆಯುವ ಮಂಡ್ಯ ಜಿಲ್ಲಾ ಸರ್ಕಾರಿ ನೌಕರರ ಸಂಘದ 2024-2029ರ ಸಾಲಿಗೆ ನಡೆಯುವ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆಗೆ ನವಂಬರ್ 27ರಂದು ಕೊನೆಯ ದಿನವಾದ ಬುಧವಾರ ಸ್ಪರ್ಧೆ ಬಯಸಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಕೆ.ನಾಗೇಶ್, ಖಜಾಂಚಿ ಸ್ಥಾನಕ್ಕೆ ಹೇಮಣ್ಣ,ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಎಸ್.ಶಂಭುಗೌಡ ಅವರು ನಗರದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿ ಕೃಷ್ಣ ಅವರಿಗೆ ನಾಮಪತ್ರ ಸಲ್ಲಿಸಿದರು.

72 ಜನ ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ನಿರ್ದೇಶಕರಿದ್ದು ನಾಮಪತ್ರ ವಾಪಸ್ ಪಡೆಯಲು ನವೆಂಬರ್ 29 ರ ಶುಕ್ರವಾರ ಕೊನೆಯ ದಿನವಾಗಿದೆ.

ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಎಸ್.ಶಂಭುಗೌಡ ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಕ್ಕೆ 60 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಐದು ಸ್ಥಾನಕ್ಕೆ ಚುನಾವಣೆ ನಡೆದು ಜಿಲ್ಲೆಯ ಏಳು ತಾಲೂಕುಗಳಿಂದ ಏಳು ಮಂದಿ ನಿರ್ದೇಶಕರು ಆಯ್ಕೆಗೊಂಡಿದ್ದಾರೆ. ಒಟ್ಟಾರೆ 72 ಮಂದಿ ನಿರ್ದೇಶಕರಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಕೆ.ನಾಗೇಶ್ ಮಾತನಾಡಿ, ಇಂದಿನಿಂದ ಜಿಲ್ಲಾಧ್ಯಕ್ಷ ಚುನಾವಣೆಯ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು ಎರಡು ಗುಂಪುಗಳ ನಿರ್ದೇಶಕರನ್ನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕ ಗಣಿಗ ರವಿಕುಮಾರ್ ಅವರು ಒಂದುಗೂಡಿಸಿದ್ದಾರೆ. ಸರ್ಕಾರಿ ನೌಕರರಲ್ಲಿ ಗುಂಪುಗಾರಿಕೆ ಬೇಡ ಅಧಿಕಾರವನ್ನು ಹಂಚಿಕೆ ಮಾಡಿ ಒಂದಾಗಿ ಹೋಗಿ ಎಂದು ಹೇಳಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಶಂಭುಗೌಡ ಅವರು ನನ್ನನ್ನು ಸೂಚಿಸಿದ್ದಾರೆ. ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಶಂಭುಗೌಡ ಅವರನ್ನು ನಾನು ಸೂಚಿಸಿದ್ದೇನೆ. ಅವಿರೋಧವಾಗಿ ಆಯ್ಕೆಯಾಗಲು 72 ಜನ ಸದಸ್ಯರು ಸಹಕಾರ ಮಾಡಬೇಕು, ಸರ್ಕಾರಿ ನೌಕರರು ಸೇವಾ ಮನೋಭಾವನೆಗೆ ಒತ್ತುಕೊಡಬೇಕು ಎಂದು ತಿಳಿಸಿದರು.

ಸಂದರ್ಭದಲ್ಲಿ ಚಂದ್ರಶೇಖರ್, ಮಂಜುನಾಥ್,ಸತೀಶ್,ರಮೇಶ್ , ಶಶಿಧರ್, ಸೇರಿದಂತೆ ಮತ್ತಿತರ ನಿರ್ದೇಶಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ