Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪೌರಕಾರ್ಮಿಕರು ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿ: ಪ್ರಕಾಶ್

ನಗರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ತಮ್ಮ‌ ಆರೋಗ್ಯದ ಬಗ್ಗೆ ಮೊದಲ ಆದ್ಯತೆ ನೀಡಬೇಕೆಂದು ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್(ನಾಗೇಶ್)ತಿಳಿಸಿದರು.

ಮಂಡ್ಯ ನಗರಸಭೆಯ ಆವರಣದಲ್ಲಿ ಫೋರಂ ಆಸ್ಪತ್ರೆ ಹಾಗೂ ನಗರಸಭೆಯ ಸಹಯೋಗದಲ್ಲಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಫೈಲ್ಸ್ ಜಾಗೃತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ದಿನನಿತ್ಯ ಕೆಲಸದಲ್ಲಿ ತೊಡಗಿರುತ್ತಾರೆ.ಕೆಲಸದ ಒತ್ತಡದಲ್ಲಿ ನಗರಸಭೆ ಸಿಬ್ಬಂದಿಗಳು ತಮ್ಮ ಆರೋಗ್ಯದ ಬಗ್ಗೆ ಗಮನ ಕೊಡುವುದಿಲ್ಲ.ಈ ಹಿನ್ನೆಲೆಯಲ್ಲಿ ನಗರಸಭೆ ಪೋರಂ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು,ನಗರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಾಗಿರಬೇಕೆಂದು ಕರೆ ನೀಡಿದರು.ಈ ಶಿಬಿರದಲ್ಲಿ ನಗರಸಭೆಯ ಸಿಬ್ಬಂದಿಗಳು ಸೇರಿದಂತೆ 35 ನಗರಸಭಾ ಸದಸ್ಯರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.

ಶಿಬಿರ ಉದ್ಘಾಟಿಸಿದ ನಗರಸಭೆ ಆಯುಕ್ತೆ ಪಂಪಾಶ್ರೀ ಮಾತನಾಡಿ,ನಗರಸಭೆ ಅಧ್ಯಕ್ಷರು ಪೋರಂ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸುವ ಮೂಲಕ ನಗರಸಭೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ.ನಗರಸಭೆಯ ಎಲ್ಲಾ ಸಿಬ್ಬಂದಿಗಳು ಈ ಶಿಬಿರದ ಸದುಪಯೋಗ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಫೋರಂ ಆಸ್ಪತ್ರೆಯ ಡಾ. ಬಿ. ಎಸ್. ರಂಜಿತ್, ಡಾ. ಐಶ್ವರ್ಯ, ಡಾ. ಭರತ್ ನಾರಾಯಣ್, ಡಾ. ಸುಶೀಲ್ ಗೌಡ, ನಗರಸಭೆ ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ನಗರಸಭೆ ಸದಸ್ಯರಾದ ಜಾಕೀರ್ ಪಾಷ, ಆರೋಗ್ಯ ವಿಭಾಗದ ಚಲುವರಾಜು, ಪೌರಸೇವಾ ನೌಕರರ ಸಂಘದ ಉಪಾಧ್ಯಕ್ಷ ಆರ್.ನಾಗರಾಜು, ಹಾಗೂ ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ