Friday, November 20, 2026

ಪ್ರಾಯೋಗಿಕ ಆವೃತ್ತಿ

ಕೊಳವೆ ಬಾವಿ ದುರಂತ ; ತಪ್ಪಿತಸ್ಥರಿಗೆ ಜೈಲು ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಅನುಮೋದನೆ

ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

ಶಿಕ್ಷೆಯ ಪ್ರಮಾಣ ಹೀಗಿದೆ

ಈ ವಿದೇಯಕವು ಕಾಯ್ದೆಯಾಗಿ ಮಾರ್ಪಟ್ಟರೇ ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು. ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ₹5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶವಿದೆ ಹಾಗೂ ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ